February 1, 2026

ಬಿಜೆಪಿ ಮುಖಂಡನ ಗುಂಡಿಕ್ಕಿ ಹತ್ಯೆ

0
image_editor_output_image2129174424-1676088443505.jpg

ನಾರಾಯಣ್‌ಪುರ: ಛತ್ತೀಸ್‌ಗಢದ ನಾರಾಯಣ್‌ಪುರ ಜಿಲ್ಲೆಯಲ್ಲಿ ಸ್ಥಳೀಯ ಬಿಜೆಪಿ ಮುಖಂಡನ ಗುಂಡಿಕ್ಕಿ ಹತ್ಯೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಹತ್ಯೆಗೀಡಾದವರನ್ನು ಬಿಜೆಪಿ ನಾರಾಯಣ್‌ಪುರ ಜಿಲ್ಲಾ ಘಟಕದ ಉಪಾಧ್ಯಕ್ಷ ಸಾಗರ್ ಸಾಹು ಎಂದು ಗುರುತಿಸಲಾಗಿದೆ.

ಈ ಕೃತ್ಯದ ಹಿಂದೆ ನಕ್ಸಲರ ಕೈವಾಡವಿದೆ ಎಂದು ಪೊಲೀಸರು ಶಂಕಿಸಿದ್ದಾರೆ.

ಛೋಟೆಡೊಂಗರ್ ಗ್ರಾಮದಲ್ಲಿ ತಮ್ಮ ಮನೆಯಲ್ಲಿದ್ದಾಗ ರಾತ್ರಿ ಸುಮಾರು 8 ಗಂಟೆಗೆ ಇಬ್ಬರು ದಾಳಿಕೋರರು ಕುಟುಂಬ ಸದಸ್ಯರ ಎದುರುಗಡೆಯೇ ಸಾಹು ಮೇಲೆ ಗುಂಡು ಹಾರಿಸಿದ್ದಾರೆ. ತಕ್ಷಣ ಅವರನ್ನು ನಾರಾಯಣ್‌ಪುರ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಯಿತು. ಈ ವೇಳೆ ಮೃತಪಟ್ಟಿದ್ದಾರೆ.

Leave a Reply

Your email address will not be published. Required fields are marked *

error: Content is protected !!