February 3, 2026

ಪುತ್ತೂರು: ಕ್ಯಾಂಪ್ಕೋದ ಸುವರ್ಣ ಮಹೋತ್ಸವ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಅಮಿತ್ ಶಾ

0
IMG-20230211-WA0035.jpg

ಮಂಗಳೂರು: ಅಂತಾರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೋದ ಸುವರ್ಣ ಮಹೋತ್ಸವ ಆಚರಣೆ ಹಿನ್ನಲೆಯಲ್ಲಿ ಕೇಂದ್ರ ಗೃಹ ಹಾಗೂ ಸಹಕಾರ ಸಚಿವರಾದ ಅಮಿತ್ ಶಾ ಅವರು ಇಂದು ಪುತ್ತೂರಿಗೆ ಆಗಮಿಸಿದ್ದು, ಕಾರ್ಯಕ್ರಮಕ್ಕೆ ಚಾಲನೆ ನೀಡಿದ್ದಾರೆ.

ಪುತ್ತೂರು ತೆಂಕಿಲ ವಿವೇಕಾನಂದ ಆಂಗ್ಲಮಾಧ್ಯಮ ಶಾಲಾ ಮೈದಾನದಲ್ಲಿ ಸಮಾವೇಶಕ್ಕೆ ತೆರಲಿರುವ ಅಮಿತ್ ಶಾ ಅವರು ಈ ವೇಳೆ ಕ್ಯಾಂಪ್ಕೋದ ಸುವರ್ಣ ಮಹೋತ್ಸವ ಚಾಲನೆ ನೀಡಿದ್ದಾರೆ.

ಈ ವೇಳೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ, ಗೃಹ ಸಚಿವ ಅರಗ ಜ್ಮಾನೇಂದ್ರ, ಸಚಿವ ಸುನೀಲ್ ಕುಮಾರ್, ನಳೀನ್ ಕುಮಾರ್ ಕಟೀಲ್, ಮಾಜಿ ಸಿಎಂ ಯಡಿಯೂರಪ್ಪ, ಕೋಟ ಶ್ರೀನಿವಾಸ ಪೂಜಾರಿ, ಪ್ರಭಾಕರ್ ಭಟ್, ಶಾಸಕ ಸಂಜೀವ ಮಠಂದೂರು ಹಾಗೂ ಮತ್ತಿತರರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

error: Content is protected !!