February 3, 2026

ಸುಳ್ಯ: ಈಜಾಡಲು ಹೊಳೆಗೆ ಇಳಿದಿದ್ದ ಯುವಕರಿಬ್ಬರು ನೀರಲ್ಲಿ ಮುಳುಗಿ ಮೃತ್ಯು
 

0
water-drowning-hands-sea-wallpaper-preview.jpg

ಸುಳ್ಯ: ಪಯಸ್ವಿನಿ ಹೊಳೆಗೆ ಈಜಾಡಲು ಹೋಗಿದ್ದ ಯುವಕರಿಬ್ಬರು ನೀರಿನಲ್ಲಿ ಮುಳುಗಿ ದಾರುಣವಾಗಿ ಸಾವನ್ನಪ್ಪಿದ ಘಟನೆ ಸುಳ್ಯ ತಾಲೂಕಿನ ಅಜ್ಜಾವರದಲ್ಲಿ ನಡೆದಿದೆ.

ಅಜ್ಜಾವರ ಗ್ರಾಮದ ದೊಡ್ಡೇರಿ ಎಂಬಲ್ಲಿಗೆ ಕಾರ್ಯಕ್ರಮವೊಂದಕ್ಕೆ ಆಗಮಿಸಿದ್ದ ಸುಮಾರು ಐದಾರು ಮಂದಿ ಯುವಕರು ಪಕ್ಕದಲ್ಲೇ ಇದ್ದ ಪಯಸ್ವಿನಿ ನದಿಗೆ ಈಜಾಡಲೆಂದು ತೆರಳಿದ್ದರು. ಯುವಕರು ನದಿಗೆ ಇಳಿದು ಈಜಾಡುತ್ತಿದ್ದಾಗ ಇಬ್ಬರು ಯುವಕರು ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ.

ನದಿಯಲ್ಲಿ ಮುಳುಗುತ್ತಿದ್ದ ಯುವಕರನ್ನು ರಕ್ಷಿಸಲು ಇತರರು ಪ್ರಯತ್ನಿಸಿದರಾದರೂ ಸಾಧ್ಯವಾಗಲಿಲ್ಲ. ಮೃತದೇಹಗಳನ್ನು ಸುಳ್ಯ ಸರ್ಕಾರಿ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಿದೆ.

Leave a Reply

Your email address will not be published. Required fields are marked *

error: Content is protected !!