March 20, 2026

ಉಳ್ಳಾಲ: ಸ್ನೇಹಿತೆಯರಿಬ್ಬರು ಜೀವನ ನಡೆಸುತ್ತಿದ್ದ ಫಾಸ್ಟ್ ಫುಡ್ ಅಂಗಡಿ ಬೆಂಕಿಗಾಹುತಿ

0
20230211_222753.jpg

ಉಳ್ಳಾಲ: ಅಗ್ನಿ ಅನಾಹುತ ದಿಂದಾಗಿ ಫಾಸ್ಟ್ ಫುಡ್ ಅಂಗಡಿಯೊಂದು ಸುಟ್ಟು ಕರಕಲಾದ ಘಟನೆ ಕುಂಪಲ ಬಾಲಕೃಷ್ಣ ಮಂದಿರದ ಬಳಿ ನಡೆದಿದೆ.

ಶಾರ್ಟ್ ಸರ್ಕ್ಯುಟ್ ನಿಂದ ಅಂಗಡಿಗೆ ಬೆಂಕಿ ತಗುಲಿರುವುದಾಗಿ ಶಂಕಿಸಲಾಗಿದೆ. ಕುಂಪಲ ಆಶ್ರಯ ಕಾಲನಿಯ ನಿವಾಸಿಗಳು ಸ್ನೇಹಿತೆಯರಾದ ಮೋಹಿನಿ ಮತ್ತು ದೀಕ್ಷಿತಾ ಜತೆಯಾಗಿ ಸಾಲ ಮಾಡಿ ಸಂಜೆ ಹೊತ್ತಲ್ಲಿ ಫಾಸ್ಟ್ ಫುಡ್ ವ್ಯಾಪಾರ ನಡೆಸುತ್ತಿದ್ದರು.

ಫಾಸ್ಟ್ ಫುಡ್ ವ್ಯಾಪಾರದಲ್ಲೇ ಸ್ವಾವಲಂಬಿ ಬದುಕು ಕಟ್ಟಿಕೊಂಡಿದ್ದ ಸ್ನೇಹಿತೆಯರೀಗ ಬೀದಿಗೆ ಬಿದ್ದಿದ್ದಾರೆ. ಬೆಂಕಿ ಅನಾಹುತದಲ್ಲಿ ಅಂಗಡಿಯೊಳಗಿದ್ದ ರೆಫ್ರಿಜರೇಟರ್ ನ ಗ್ಯಾಸ್ ಸಿಲಿಂಡರ್ ಸಿಡಿದಿದ್ದು ಕಟ್ಟಡದ ಗೋಡೆ ಬಿರುಕು ಬಿಟ್ಟಿದೆ.ಸ್ಥಳೀಯರೆ ಸೇರಿ ತಕ್ಷಣ ಬೆಂಕಿಯನ್ನ ಆರಿಸಿದ್ದಾರೆ.ಸ್ಥಳಕ್ಕೆ ಬಂದ ಅಗ್ನಿ ಶಾಮಕದಳದ ಸಿಬ್ಬಂದಿ ಬೆಂಕಿ ವ್ಯಾಪಿಸದಂತೆ ಕಾರ್ಯಾಚರಣೆ ನಡೆಸಿದ್ದಾರೆ. ಘಟನೆಯಿಂದ ಸುಮಾರು ಒಂದು ಲಕ್ಷಕ್ಕೂ ಅಧಿಕ ನಷ್ಟ ಸಂಭವಿಸಿದೆ. ಸೋಮೇಶ್ವರ ಪುರಸಭಾ ಅಧಿಕಾರಿಗಳು ಮತ್ತು ಉಳ್ಳಾಲ ಠಾಣಾ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.

Leave a Reply

Your email address will not be published. Required fields are marked *

You may have missed

error: Content is protected !!