ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯ 10 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲುವು ನಿಶ್ಚಿತ: ಡಿ.ಕೆ. ಶಿವಕುಮಾರ್
ಬೆಂಗಳೂರು: ಈ ಬಾರಿಯ ವಿಧಾನಸಭೆ ಚುನಾವಣೆಯಲ್ಲಿ ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ 10 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಲಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಸುದ್ದಿಗಾರರ ಜತೆ ಮಾತನಾಡಿದ ಅವರು, ಬಿಜೆಪಿಯ ಆಂತರಿಕ ಸಮೀಕ್ಷೆಯಲ್ಲಿ ಕರಾವಳಿಯಲ್ಲಿ ಕಾಂಗ್ರೆಸ್ 4 ಕ್ಷೇತ್ರಗಳಲ್ಲಿ ಗೆಲ್ಲಲಿದೆ ಎಂಬ ವರದಿ ಇದೆ ಎಂದು ಹೇಳಲಾಗುತ್ತಿದೆ. ಅದು ತಪ್ಪು, ನಮ್ಮ ವರದಿಯಲ್ಲಿ 10 ಕ್ಷೇತ್ರಗಳಲ್ಲಿ ಗೆಲ್ಲುತ್ತೇವೆ ಎಂದು ಬಂದಿದೆ ಎಂದು ಹೇಳಿದರು.




