ಮಡಿಕೇರಿ: ಮೀನು ಹಿಡಿಯಲು ತೆರಳಿದ್ದ ಇಬ್ಬರು ಬಾಲಕರು ನದಿಯಲ್ಲಿ ಮುಳುಗಿ ಮೃತ್ಯು
ಮಡಿಕೇರಿ: ಮೀನು ಹಿಡಿಯಲು ತೆರಳಿದ್ದ ಬಾಲಕರು ಕಾವೇರಿ ನದಿಯಲ್ಲಿ ಮುಳುಗಿ ಮೃತಪಟ್ಟ ಘಟನೆ ಕೊಡಗು ಜಿಲ್ಲೆಯ ಕುಶಾಲನಗರ ತಾಲೂಕಿನ ಕೂಡ್ಲೂರು ಗ್ರಾಮದಲ್ಲಿ ನಡೆದಿದೆ.
ಪೃಥ್ವಿ (7), ಪ್ರಜ್ವಲ್ (4) ಮೃತ ಬಾಲಕರು. ಕೂಡ್ಲುರು ಗ್ರಾಮದ ಬಳಿ ಮಾವಿನತೋಪು ಸಮೀಪ ಕಾವೇರಿ ನದಿಯಲ್ಲಿ ಮೀನು ಹಿಡಿಯಲು ಹೋಗಿದ್ದರು.
ಈ ಸಂದರ್ಭ ಆಕಸ್ಮಿಕವಾಗಿ ಮುಳುಗಿ ಇಬ್ಬರು ಬಾಲಕರು ಸಾವನ್ನಪ್ಪಿದ್ದಾರೆ.
ಮನೆಯ ಸಮೀಪ ಜಮೀನಿಗೆ ಹೊಂದಿಕೊಂಡಂತೆ ಇದ್ದ ಕಾವೇರಿ ನದಿಯಲ್ಲಿ ಭಾನುವಾರ ಬೆಳಗ್ಗೆ ಈ ದುರ್ಘಟನೆ ಸಂಭವಿಸಿದೆ.
ಘಟನಾ ಸ್ಥಳಕ್ಕೆ ಅಗ್ನಿಶಾಮಕದಳದ ಸಿಬ್ಬಂದಿ ಹಾಗೂ ಕುಶಾಲನಗರ ಪೊಲೀಸರು ಭೇಟಿ ನೀಡಿ ಕಾವೇರಿಯಲ್ಲಿ ಮುಳುಗಿದ್ದ ಮೃತ ಬಾಲಕರ ದೇಹವನ್ನು ನದಿ ಹೊರತೆಗೆದಿದ್ದಾರೆ.
ಕುಶಾಲನಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.




