15 ಕೋಟಿ ರೂ. ಬ್ಯಾಂಕ್ ಬ್ಯಾಲೆನ್ಸ್ ತೋರಿಸಿದವರಿಗೆ ಕಾಂಗ್ರೆಸ್ ಟಿಕೆಟ್:
ವಿಧಾನ ಪರಿಷತ್ ಸದಸ್ಯ ಹೆಚ್.ವಿಶ್ವನಾಥ್ ಗಂಭೀರ ಆರೋಪ
ಮೈಸೂರು: ಕಾಂಗ್ರೆಸ್ ನಲ್ಲಿ ವಿಧಾನ ಪರಿಷತ್ ಟಿಕೆಟ್ ಪಡೆಯಲು 15 ಕೋಟಿ ಬೇಕು ಎಂದು ವಿಧಾನ ಪರಿಷತ್ ಸದಸ್ಯ ಹೆಚ್.ವಿಶ್ವನಾಥ್ ಹೊಸ ಬಾಂಬ್ ಹಾಕಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಟಿಕೆಟ್ ಬೇಕಾದರೆ ಒಂದು ಲಕ್ಷ ನಾನ್ ರಿಟರ್ನೇಬಲ್ ಫಂಡ್ ಕೊಡಬೇಕು. 15 ಕೋಟಿ ರೂ. ಬ್ಯಾಂಕ್ ಬ್ಯಾಲೆನ್ಸ್ ತೊರಿಸಿದವರಿಗೆ ಮಾತ್ರ ಟಿಕೆಟ್ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಟಿಕೆಟ್ ಬಯಸುವವರಿಗೆ ಹೇಳಿದ್ದಾರೆ. ಹೀಗಾದರೆ ಸಾಮಾಜಿಕ ನ್ಯಾಯ ಎಲ್ಲಿ ಸಿಗುತ್ತದೆ ಹೇಳಿ. ಕಾಂಗ್ರೆಸ್ ನಲ್ಲೂ ಕೂಡ ಈಗ ಸಾಮಾಜಿಕ ನ್ಯಾಯ ದೂರವಾಗುತ್ತಿದೆ ಎಂದು ವಿಷಾದ ವ್ಯಕ್ತಪಡಿಸಿದರು.
ಎಂಟು ಉಪಚುನಾವಣೆ ನಡೆದಿದೆ. ಆ ಸಂದರ್ಭದಲ್ಲಿ ಭ್ರಷ್ಟಾಚಾರದ ಬಗ್ಗೆ ಮಾತನಾಡಲಿಲ್ಲ. ಈಗ ಚುನಾವಣೆ ಹತ್ತಿರ ಬಂದಿದೆಯೆಂದು ಭ್ರಷ್ಟಾಚಾರ ಬಗ್ಗೆ ಮಾತನಾಡುತ್ತಿದ್ದಾರೆ. ಯುವಕರನ್ನು ಚುನಾವಣೆ ನಿಲ್ಲಿಸಿ. ಅದನ್ನು ಬಿಟ್ಟು ದುಡ್ಡು ತೆಗೆದುಕೊಂಡು ಬಾ ಅಂತ ಹೇಳುವುದಿಲ್ಲ ಎಂದು ವಿಶ್ವನಾಥ್ ಹೇಳಿದರು.





