ಪುತ್ತೂರು: ಆರ್ಲಪದವಿನಲ್ಲಿ ಅಕ್ರಮ ಗೋ ಸಾಗಾಟ ತಡೆದ ಸಂಘ ಪರಿವಾರದ ಕಾರ್ಯಕರ್ತರು: ಸ್ಥಳಕ್ಕಾಗಮಿಸಿ ಚೆಕ್ ಪೋಸ್ಟ್ ನಿರ್ಮಾಣಕ್ಕೆ ಆಗ್ರಹಿಸಿದ ಅರುಣ್ ಪುತ್ತಿಲ
ಪುತ್ತೂರು: ಆರ್ಲಪದವಿನಲ್ಲಿ ಅಕ್ರಮ ಗೋ ಸಾಗಾಟವನ್ನು ಸಂಘ ಪರಿವಾರದ ಕಾರ್ಯಕರ್ತರು ತಡೆದಿದ್ದು, ಜಾನುವಾರುಗಳನ್ನು ಪೊಲೀಸರಿಗೊಪ್ಪಿಸಿದ ಘಟನೆನಡೆದಿದೆ.
ಆಪೆ ವಾಹನದಲ್ಲಿ ದನ ಹಾಗೂ ಗಂಡು ಕರುವನ್ನು ಅಕ್ರಮವಾಗಿ ಕೇರಳಕ್ಕೆ ಸಾಗಾಟ ಮಾಡುತ್ತಿದ್ದು, ಈ ಬಗ್ಗೆ ತಿಳಿದ ಸಂಘ ಪರಿವಾರದ ಕಾರ್ಯಕರ್ತರು ವಾಹನವನ್ನು ತಡೆದಿದ್ದಾರೆ.
ಇನ್ನು ಕಾರ್ಯಕರ್ತರು ಈ ಬಗ್ಗೆ ಸಂಘ ಪರಿವಾರದ ಮುಖಂಡ ಅರುಣ್ ಕುಮಾರ್ ಪುತ್ತಿಲ ರವರಿಗೆ ಮಾಹಿತಿ ನೀಡಿದ್ದು, ತಕ್ಷಣ ಸ್ಪಂದಿಸಿದ ಅರುಣ್ ಕುಮಾರ್ ಪುತ್ತಿಲ ರವರು ಸ್ಥಳಕ್ಕೆ ಆಗಮಿಸಿ ಪೊಲೀಸರೊಂದಿಗೆ ಮಾತುಕತೆ ನಡೆಸಿ, ದನಗಳನ್ನು ಪೊಲೀಸರಿಗೊಪ್ಪಿಸಿದ್ದು, ಈ ಸ್ಥಳದಲ್ಲಿ ಚೆಕ್ ಪೋಸ್ಟ್ ನಿರ್ಮಾಣ ಮಾಡುವಂತೆ ಅಧಿಕಾರಿಗಳಲ್ಲಿ ಮನವಿ ಮಾಡಿದ್ದಾರೆ.




