May 11, 2026

ಸುರತ್ಕಲ್‌: ಕ್ಷುಲಕ ಕಾರಣಕ್ಕೆ ಕಾರ್ಮಿಕರ ಮಧ್ಯೆ ಹೊಡೆದಾಟ: ಓರ್ವ ಮೃತ್ಯು, ಇಬ್ಬರಿಗೆ ಗಾಯ

0
IMG-20230213-WA0015.jpg

ಸುರತ್ಕಲ್‌: ಕ್ಷುಲಕ ಕಾರಣಕ್ಕೆ ಕಾರ್ಮಿಕರ ಮಧ್ಯೆ ಹೊಡೆದಾಟ ನಡೆದು ಓರ್ವ ಮೃತಪಟ್ಟು, ಮತ್ತಿಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿರುವ ಘಟನೆ ಶನಿವಾರ ರಾತ್ರಿ ಕುಳಾಯಿ ಬಳಿ ನಡೆದಿದೆ.

ಮೃತ ಯುವಕನ್ನು ಬಿಹಾರ ಮೂಲದ ಚೋಟು ಕುಮಾರ್ (21) ಎಂದು ಗುರುತಿಸಲಾಗಿದೆ. ಮೃತ ಯುವಕ ಮತ್ತು ಆರೋಪಿಗಳು ಕುಳಾಯಿಯ ಮಾರ್ಬಲ್‌ ಅಂಗಡಿಯೊಂದರಲ್ಲಿ ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ. ಶನಿವಾರ ರಾತ್ರಿ ಊಟಕ್ಕೆ ಸಂಬಂಧಿಸಿಂತೆ ಮೂವರ ಮಧ್ಯೆ ಮಾತಿಗೆ ಮಾತು ಬೆಳೆದು ಹೊಡೆದಾಡಿಕೊಂಡಿದ್ದಾರೆ. ಗಲಾಟೆಯಲ್ಲಿ ಮೂವರೂ ಗಾಯಗೊಂಡಿದ್ದು, ಮುಕ್ಕದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಘಟನೆಯಿಂದ ಗಂಭೀರ ಗಾಯಗೊಂಡಿದ್ದ ಛೋಟು ಚಿಕಿತ್ಸೆ ಫಲಕಾರಿಯಾಗದೇ ಭಾನುವಾರ ಸಂಜೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

ಗಾಯಗೊಂಡಿದ್ದ ಮತ್ತಿಬ್ಬರು ಪ್ರಾಣಾಪಾಯದಿಂದ ಪಾರಾಗಿದ್ದು, ಸುರತ್ಕಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

error: Content is protected !!