March 21, 2026

ಪಿಎಸ್‌ಐ ಸಮವಸ್ತ್ರ ಧರಿಸಿ ಸಾರ್ವಜನಿಕರಿಂದ ಹಣ ವಸೂಲಿ: ಸಿಕ್ಕಿಬಿದ್ದ ನಕಲಿ ಪೊಲೀಸ್

0
image_editor_output_image828235308-1676354103786.jpg

ಮಂಡ್ಯ: ಪಿಎಸ್‌ಐ ಸಮವಸ್ತ್ರ ಧರಿಸಿ ಸಾರ್ವಜನಿಕರಿಂದ ಹಣ ವಸೂಲಿ ಮಾಡುತ್ತಿದ್ದ ನಕಲಿ ಪೊಲೀಸ್ ಅನ್ನು ಅಸಲಿ ಪೊಲೀಸರು ಬಂಧಿಸಿರುವ ಘಟನೆ ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಕೆಎಂ ದೊಡ್ಡಿಯಲ್ಲಿ ನಡೆದಿದೆ.

ಬೆಂಗಳೂರಿನ ಗೊಟ್ಟಿಗೆರೆ ನಿವಾಸಿ ಸಂಜಯ್ ಬಂಧಿತ ಆರೋಪಿಯಾಗಿದ್ದಾನೆ. ಸಂಜಯ್ ಪಿಎಸ್‌ಐ ಸಮವಸ್ತ್ರ ಧರಿಸಿ ಕೆಎಂ ದೊಡ್ಡಿ ಸುತ್ತಮುತ್ತ ದ್ವಿಚಕ್ರ ವಾಹನಗಳನ್ನು ತಡೆದು ತಪಾಸಣೆ ನಡೆಸುತ್ತಿದ್ದರು.

ಬಳಿಕ ಸಂಚಾರಿ ನಿಯಮ ಉಲ್ಲಂಘನೆಯಾಗಿದೆ ಎಂದು ವಾಹನ ಸವಾರರಿಂದ ಹಣ ವಸೂಲಿ ಮಾಡುತ್ತಿದ್ದ. ನಕಲಿ ಪೊಲೀಸ್ ಸಾರ್ವಜನಿಕರಿಂದ ಹಣ ವಸೂಲಿ ಮಾಡುತ್ತಿರುವುದರ ಬಗ್ಗೆ ಸ್ಥಳೀಯರು ಕೆಎಂ ದೊಡ್ಡಿ ಠಾಣೆಯ ಇನ್ಸ್ಪೆಕ್ಟರ್ ಆನಂದ್‌ಗೆ ಮಾಹಿತಿ ನೀಡಿದ್ದಾರೆ.

Leave a Reply

Your email address will not be published. Required fields are marked *

error: Content is protected !!