March 20, 2026

ಯೂನಿವರ್ಸಿಟಿಯ ಕ್ಯಾಂಪಸ್‌ನಲ್ಲಿ ಬಂದೂಕುಧಾರಿಯಿಂದ ಗುಂಡಿನ ದಾಳಿ: ಮೂವರು ಮೃತ್ಯು, ಹಲವರಿಗೆ ಗಾಯ

0
image_editor_output_image490124758-1676366418486.jpg

ಮಿಚಿಗನ್: ಅಮೆರಿಕದ ಈಸ್ಟ್‌ ಲ್ಯಾನ್ಸಿಂಗ್‌ನ ಮಿಚಿಗನ್ ಸ್ಟೇಟ್ ಯೂನಿವರ್ಸಿಟಿಯ ಕ್ಯಾಂಪಸ್‌ನಲ್ಲಿ ಎರಡು ಕಡೆ ಬಂದೂಕುಧಾರಿಯೊಬ್ಬ ಗುಂಡಿನ ದಾಳಿ ನಡೆಸಿದ್ದಾನೆ.

ಘಟನೆಯಲ್ಲಿ ಮೂವರು ಮೃತಪಟ್ಟು, ಹಲವರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಘಟನೆಯಲ್ಲಿ ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂಬ ವರದಿ ಬಂದ ಗಂಟೆ ಬಳಿಕ ಮೂವರ ಸಾವಿನ ಸುದ್ದಿಯನ್ನು ಪೊಲೀಸರು ಪ್ರಕಟಿಸಿದ್ದಾರೆ.

ಗಾಯಾಳುಗಳಲ್ಲಿ ಹಲವರ ಸ್ಥಿತಿ ಗಂಭೀರವಾಗಿದೆ ಎಂದು ಪೊಲೀಸ್ ಅಧಿಕಾರಿ ಕ್ರಿಸ್ ರೋಜ್‌ಮನ್ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

You may have missed

error: Content is protected !!