May 14, 2026

ಬಂಟ್ವಾಳ: ರಸ್ತೆ ದಾಟುತ್ತಿದ್ದ ಅಪರಿಚಿತ ವಾಹನ ಢಿಕ್ಕಿ: ಆಸ್ಪತ್ರೆಗೆ ದಾಖಲು

0
image_editor_output_image-2110337803-1676521558634.jpg

ಬಂಟ್ವಾಳ : ರಸ್ತೆ ದಾಟುತ್ತಿದ್ದ ಅಪರಿಚಿತ ವ್ಯಕ್ತಿಗೆ ವಾಹನವೊಂದು ಡಿಕ್ಕಿಯಾದ ಪರಿಣಾಮ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಸಮೀಪದ ಪೊನ್ನೊಡಿ ಎಂಬಲ್ಲಿ ನಡೆದಿದೆ.

ಬಿ.ಮೂಡ ಗ್ರಾಮದ ಪೊನ್ನೊಡಿ ಎಂಬಲ್ಲಿ ಟಾಟ ಇಂಟ್ರಾ ವಾಹನೊಂದು ರಸ್ತೆ ದಾಟುತ್ತಿದ್ದ ಅಪರಿಚಿತ ವ್ಯಕ್ತಿಯೊರ್ವನಿಗೆ ಡಿಕ್ಕಿ ಹೊಡೆದಿದೆ.

ಡಿಕ್ಕಿಯ ಪರಿಣಾಮ ರಸ್ತೆ ಬಿದ್ದ ವ್ಯಕ್ತಿ ಗೆ ಗಂಭೀರವಾಗಿ ಗಾಯವಾಗಿದ್ದು, ಮಂಗಳೂರು ವೆನ್ಲಾಕ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಐಸಿಯು ನಲ್ಲಿ ಚಿಕಿತ್ಸೆ ಪಡೆಯುತ್ತಿರುವ ಹಿನ್ನೆಲೆಯಲ್ಲಿ ಗಾಯಾಳುವಿನ ವಿವರ ಲಭ್ಯವಾಗಿಲ್ಲ..

ಈತನ ಬಗ್ಗೆ ಮಾಹಿತಿ ಸಿಕ್ಕಿಲ್ಲವಾದ್ದರಿಂದ ಸಂಬಂಧಪಟ್ಟ ವ್ಯಕ್ತಿಗಳು ಪೋಟೋ ನೋಡಿ ಗುರುತು ಪತ್ತೆ ಹಚ್ಚಿದರೆ ಮಂಗಳೂರು ವೆನ್ಲಾಕ್ ಆಸ್ಪತ್ರೆಗೆ ಹೋಗಬಹುದು, ಅಥವಾ ಮೆಲ್ಕಾರ್ ಟ್ರಾಫಿಕ್ ಎಸ್.ಐ.ಮೂರ್ತಿ ಅವರನ್ನು ಸಂಪರ್ಕ ಮಾಡುವಂತೆ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!