September 20, 2024

“ನೀವೇ ಕೋವಿ ಹಿಡಿದುಕೊಂಡು ಬನ್ನಿ”: ಅಶ್ವತ್ಥನಾರಾಯಣ್ ಗೆ ಸಿದ್ದರಾಮಯ್ಯ ತಿರುಗೇಟು

0

ಬೆಂಗಳೂರು: ನನ್ನ ಹತ್ಯೆ ಮಾಡುವಂತೆ ರಾಜ್ಯದ ಒಬ್ಬ ಸಚಿವ ಬಹಿರಂಗವಾಗಿ ಕರೆ ನೀಡಿದ ನಂತರವೂ ಅವರ ವಿರುದ್ಧ ಪೊಲೀಸರು ಕ್ರಮಕೈಗೊಂಡಿಲ್ಲ ಎಂದಾದರೆ ಈ ರಾಜ್ಯವನ್ನು ಆಳುವವರು ಜೀವಂತವಾಗಿಲ್ಲ, ಸರ್ಕಾರ ಸತ್ತುಹೋಗಿದೆ ಎಂದೇ ಲೆಕ್ಕ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಟಿಪ್ಪುವನ್ನು ಹೊಡೆದು ಹಾಕಿದಂತೆ ಸಿದ್ದರಾಮಯ್ಯ ಅವರನ್ನು ಹೊಡದು ಹಾಕಬೇಕು ಎಂದು ಹೇಳಿದ್ದ ಉನ್ನತ ಶಿಕ್ಷಣ ಸಚಿವ ಅಶ್ವತ್ಥ್ ನಾರಾಯಣ್ ಅವರ ಹೇಳಿಕೆಗೆ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಖಾರವಾಗಿಯೇ ತಿರುಗೇಟು ನೀಡಿದ್ದಾರೆ. ಸಚಿವ ಅಶ್ವತ್ಥ್ ನಾರಾಯಣ್ ಹೇಳಿಕೆ ಕುರಿತಂತೆ ಸರಣಿ ಟ್ವೀಟ್ ಮಾಡಿರುವ ಸಿದ್ದರಾಮಯ್ಯ ಅವರು, ನನ್ನನ್ನು ಹತ್ಯೆ ಮಾಡಲು ನೀವೇ ಕೋವಿ ಹಿಡಿದುಕೊಂಡು ಬನ್ನಿ ಎಂದು ಹೇಳುವ ಮೂಲಕ ತಿರುಗೇಟು ನೀಡಿದ್ದಾರೆ.

Leave a Reply

Your email address will not be published. Required fields are marked *

error: Content is protected !!