ಡಿವೈಡರ್ ಗೆ ಕಾರು ಡಿಕ್ಕಿ: ಸ್ಥಳದಲ್ಲೇ ನಾಲ್ವರು ಮೃತ್ಯು
ಕೊಪ್ಪಳ: ಕಾರೊಂದು ಕುಕನೂರು ತಾಲೂಕಿನ ಬನ್ನಿಕೊಪ್ಪ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿರುವ ಸೇತುವೆಯ ಗೋಡೆಗೆ ಗುದ್ದಿದ ಪರಿಣಾಮ ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ನಡೆದಿದೆ.
ಮೃತರು ಇಬ್ಬರು ಮಹಿಳೆಯರು ಹಾಗೂ ಇಬ್ಬರು ಪುರುಷರಾಗಿದ್ದು ಇವರೆಲ್ಲರೂ ಹೈದ್ರಾಬಾದ್ ಮೂಲದವರು ಎಂದು ವರದಿಯಾಗಿದೆ.
ಮೃತಪಟ್ಟವರ ಹೆಸರು ಹಾಗೂ ವಿಳಾಸಕ್ಕಾಗಿ ಪೊಲೀಸರು ಶೋಧ ನಡೆಸುತ್ತಿದ್ದಾರೆ. ಕುಕನೂರು ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.




