February 4, 2026

ವಿಟ್ಲ: ಅಕ್ರಮ ಮರಳು ಸಾಗಾಟ ಪ್ರಕರಣ: ತಲೆಮರೆಸಿಕೊಂಡಿದ್ದ ಆರೋಪಿ ಪೊಲೀಸರ ವಶಕ್ಕೆ

0
IMG-20230216-WA0025.jpg

ವಿಟ್ಲ: ಅಕ್ರಮ ಮರಳು ಸಾಗಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದಿರುವ ಘಟನೆ ನಡೆದಿದೆ.

ಆರೋಪಿಯನ್ನು ಕೇರಳದ ಕೊಯಿಲಾಂಡಿ ನಿವಾಸಿ ಸುರೇಶ್ ಬಾಬು ಯಾನೆ ಸೂರಿ ಎಂದು ಗುರುತಿಸಲಾಗಿದೆ.

ಆರೋಪಿಯು ನ್ಯಾಯಾಲಯಕ್ಕೆ ಹಾಜರಾದೇ ತಲೆಮರೆಸಿಕೊಂಡಿದ್ದು, ಈ ಬಗ್ಗೆ ವಾರೆಂಟ್ ಜಾರಿಯಾಗಿ ಪತ್ತೆಯಾಗದೇ ಇದ್ದು, ಇದೀಗ ಆರೋಪಿಯನ್ನು ಎಎಸ್ಐ ಜಯರಾಮ ಎಂಬವರು ಕೇರಳ ರಾಜ್ಯದ ಕೊಯಿಲಾಂಡಿಯ ವಾರಾಂಗೀಲ್ ಎಂಬಲ್ಲಿ ದಸ್ತಗಿರಿ ಮಾಡಿ ಇಂದು ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!