ಪುತ್ತೂರು: ಚೆಕ್ ಅಮಾನ್ಯ ಪ್ರಕರಣ: ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್
ಪುತ್ತೂರು: ಚೆಕ್ ಅಮಾನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿರುವ ಘಟನೆ ನಡೆದಿದೆ.
ಆರೋಪಿಯನ್ನು ಪುತ್ತೂರು ತಾಲೂಕಿನ ಕೃಷ್ಣನಗರ ನಿವಾಸಿ ಕಲಂದರ್ ನವಾಜ್ ಎಂದು ಗುರುತಿಸಲಾಗಿದೆ.
ಚೆಕ್ ಅಮಾನ್ಯ ಪ್ರಕರಣದಲ್ಲಿ ನಗರ ಠಾಣೆಯಲ್ಲಿ ಕೇಸು ದಾಖಲಾಗಿದ್ದು, ನ್ಯಾಯಾಲಯದಿಂದ ವಾರೆಂಟ್ ಜಾರಿಯಾಗಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪುತ್ತೂರು ನಗರ ಠಾಣಾ ಹೆಚ್ ಸಿ ಪರಮೇಶ್ವರ ಮತ್ತು ಪಿ ಸಿ ಗಿರಿ ಪ್ರಶಾಂತ್ ದಸ್ತಗಿರಿ ಮಾಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.




