March 21, 2026

ಉಡುಪಿ: ಪೊಲೀಸ್ ನಿರೀಕ್ಷಕರ ವಸತಿ ಗೃಹದಿಂದ ಸೈಕಲ್ ಕಳವು: ದೂರು ದಾಖಲು

0
IMG-20230217-WA0016.jpg

ಉಡುಪಿ: ಪೊಲೀಸ್ ಅಧಿಕಾರಿಗಳ ವಸತಿ ಗೃಹದ ಪಕ್ಕದಲ್ಲಿನ ಶೆಡ್‌ನಲ್ಲಿ ನಿಲ್ಲಿಸಿದ್ದ ಸೈಕಲ್ ಕಳವಾದ ಘಟನೆ ನಡೆದಿದೆ.

ಉಡುಪಿ ಲೋಕಾಯುಕ್ತ ಪೊಲೀಸ್ ಠಾಣೆಯ ನಿರೀಕ್ಷಕರಾದ ರಫೀಕ್ ಎಂ.ಅವರು ಉಡುಪಿ ನಗರ ಪೊಲೀಸ್ ಠಾಣೆಯ ಪಕ್ಕದಲ್ಲಿರುವ ಪೊಲೀಸ್ ಅಧಿಕಾರಿಗಳ ವಸತಿ ಗೃಹದಲ್ಲಿ ತನ್ನ ಸಂಸಾರದೊಂದಿಗೆ ವಾಸವಾಗಿದ್ದು, ಇವರ ಕಾರು, ಸ್ಕೂಟಿ ಹಾಗೂ ಎರಡು ಸೈಕಲ್‌ಗಳನ್ನು ವಸತಿಗೃಹದ ಪಕ್ಕದಲ್ಲಿನ ಶೆಡ್‌ನಲ್ಲಿ ನಿಲ್ಲಿಸಿದ್ದರು

ಇನ್ನು ಫೆ.13ರಿಂದ ಫೆ.14ರ ನಡುವೆ ಕಳ್ಳರು ಸೈಕಲ್‌ ಗಳಿಗೆ ಅಳವಡಿಸಿದ ಬೀಗವನ್ನು ಮುರಿದು ಒಟ್ಟು 16,100 ರೂ.ಮೌಲ್ಯದ ಎರಡು ಸೈಕಲ್‌ಗಳನ್ನು ಕಳ್ಳತನ ಮಾಡಿದ್ದಾರೆ.

ಈ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

You may have missed

error: Content is protected !!