March 21, 2026

ಪ್ರೀತಿ ನಿರಾಕರಿಸಿದಕ್ಕೆ ವಿದ್ಯಾರ್ಥಿನಿಯ ಮೇಲೆ ಆ್ಯಸಿಡ್ ದಾಳಿ: ಆರೋಪಿಯ ಬಂಧನ

0
image_editor_output_image-1164214632-1676701428192.jpg

ರಾಮನಗರ: ಪ್ರೀತಿ ನಿರಾಕರಿಸಿದಕ್ಕೆ ವಿದ್ಯಾರ್ಥಿನಿಯ ಮೇಲೆ ಆ್ಯಸಿಡ್ ಎರಚಿ ಪರಾರಿಯಾಗಿದ್ದ ಆರೋಪಿಯನ್ನು ಕನಕಪುರ ನಗರ ಪೊಲೀಸರು ಬಂಧಿಸಿರುವುದಾಗಿ ವರದಿಯಾಗಿದೆ.

ಈ ಸಂಬಂಧ ಕನಕಪುರ ಟೌನ್ ಠಾಣೆಯಲ್ಲಿ ಪೊಕ್ಸೊ ಅಡಿ ಪ್ರಕರಣ ದಾಖಲಾಗಿತ್ತು.

ಕನಕಪುರದ ನಿವಾಸಿ ಸುಮಂತ್ ಬಂಧಿತ ಆರೋಪಿ ಎಂದು ಪೊಲೀಸರು ತಿಳಿಸಿದ್ದಾರೆ. ವಿದ್ಯಾರ್ಥಿನಿಯನ್ನು ಅಡ್ಡಗಟ್ಟಿದ ಸುಮಂತ ಪ್ರೀತಿಸುವಂತೆ ಪೀಡಿಸಿದ್ದು, ವಿದ್ಯಾರ್ಥಿನಿ ಪ್ರೀತಿಯನ್ನು ನಿರಾಕರಿಸಿದ್ದಾಳೆ ಎನ್ನಲಾಗಿದೆ. ಈ ವೇಳೆ ಆರೋಪಿ ಸುಮಂತ್ ವಿದ್ಯಾರ್ಥಿನಿಯ ಮುಖಕ್ಕೆ ಆ್ಯಸಿಡ್ ಎರಚಿ ಪರಾರಿಯಾಗಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

You may have missed

error: Content is protected !!