ಸ್ಕೂಟಿಗೆ ಕಾರು ಢಿಕ್ಕಿ: ಮಹಿಳೆ ಮೃತ್ಯು
ಸಾಗರ: ಸ್ಕೂಟಿಗೆ ಕಾರುವೊಂದು ಢಿಕ್ಕಿ ಹೊಡೆದ ಪರಿಣಾಮ ಮಹಿಳೆಯೊಬ್ಬರು ಮೃತಪಟ್ಟ ಘಟನೆ ತಾಲೂಕಿನ ರಾಷ್ಟ್ರೀಯ ಹೆದ್ದಾರಿ ನೇದರವಳ್ಳಿ ಸಮೀಪ ಶನಿವಾರ ಬೆಳಿಗ್ಗೆ ನಡೆದಿರುವುದಾಗಿ ವರದಿಯಾಗಿದೆ.
ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ, ಪರಶೀಲನೆ ನಡೆಸಿದರು. ಭದ್ರಾವತಿ ನಿವಾಸಿ ಶೃತಿ (23) ಮೃತಪಟ್ಟ ಮಹಿಳೆ ಎಂದು ಗುರುತಿಸಲಾಗಿದೆ.
ಇವರು ಶಿವಮೊಗ್ಗದ ಸಿಟಿ ಸೆಂಟರ್ ಮಾಲ್ ನಲ್ಲಿ ಸೆಕ್ಯೂರಿಟಿ ಗಾರ್ಡ್ ಆಗಿ ಕಾರ್ಯನಿರ್ವಹಿಸುತ್ತಿದ್ದರು ಎಂದು ತಿಳಿದು ಬಂದಿದೆ.




