May 11, 2026

ಬಂಟ್ವಾಳ: ಯುವಕನಿಗೆ ಚೂರಿ ಇರಿದು ಪರಾರಿ

0
image_editor_output_image1746018532-1676716818049

ಬಂಟ್ವಾಳ: ಯುವಕನೋರ್ವನಿಗೆ ಚೂರಿಯಿಂದ ಇರಿದು ಗಾಯಗೊಳಿಸಿದ ಘಟನೆ ಫೆ.18 ರಂದು ಮಧ್ಯಾಹ್ನ ಪಾಣೆಮಂಗಳೂರು ಎಂಬಲ್ಲಿ ನಡೆದಿದೆ.

ಪಾಣೆಮಂಗಳೂರು ನೆಹರು ನಗರ ನಿವಾಸಿ ಸುಲೈಮಾನ್ ಎಂಬವನಿಗೆ ಆತನ ಸ್ನೇಹಿತ ನಿಸಾರ್ ಚೂರಿ ಇರಿದು ಪರಾರಿಯಾಗಿದ್ದಾನೆ ಎಂದು ಹೇಳಲಾಗಿದೆ.

ಮಧ್ಯಾಹ್ನ ಸುಮಾರು 1.30 ಗಂಟೆ ವೇಳೆ ಇವರಿಬ್ಬರು ನೆಹರು ನಗರದ ಬಳಿ ಬಂದಿದ್ದು, ಕ್ಷುಲ್ಲಕ ಕಾರಣಕ್ಕಾಗಿ ಮಾತಿಗೆ ಮಾತು ಬೆಳೆದು ನಿಶಾರ್ ಸುಲೈಮಾನ್ ಗೆ ಚೂರಿಯಿಂದ ಹೊಟ್ಟೆಯ ಭಾಗಕ್ಕೆ ತಿವಿದಿದ್ದಾನೆ ಎನ್ನಲಾಗಿದೆ.

ಗಾಯಗೊಂಡ ಸುಲೈಮಾನ್ ನನ್ನು ತುಂಬೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಘಟನಾ ಸ್ಥಳಕ್ಕೆ ಬಂಟ್ವಾಳ ನಗರ ಠಾಣಾ ಪೋಲೀಸ್ ಇನ್ಸ್ ಪೆಕ್ಟರ್ ವಿವೇಕಾನಂದ ಭೇಟಿ ನೀಡಿದ್ದಾರೆ

Leave a Reply

Your email address will not be published. Required fields are marked *

error: Content is protected !!