March 21, 2026

ಧರ್ಮಸ್ಥಳಕ್ಕೆ ಪಾದಯಾತ್ರೆ ಹೊರಟಿದ್ದ ಯುವಕ ನಾಪತ್ತೆ: ಹುಡುಕಿಕೊಟ್ಟವರಿಗೆ ಬಹುಮಾನ ಘೋಷಣೆ

0
image_editor_output_image-753674064-1676870025634.jpg

ಚಿಕ್ಕಮಗಳೂರು: ಧರ್ಮಸ್ಥಳಕ್ಕೆ ಪಾದಯಾತ್ರೆ ಹೊರಟಿದ್ದ ಯುವಕನೊಬ್ಬ ಜಿಲ್ಲೆಯ ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರದಲ್ಲಿ ನಾಪತ್ತೆಯಾಗಿದ್ದು, ಆತನನ್ನು ಹುಡುಕಿಕೊಟ್ಟವರಿಗೆ 5,000 ರೂ. ಬಹುಮಾನ ನೀಡುತ್ತೇವೆ ಎಂದು ಆತನ ಪೋಷಕರು ಹೇಳಿದ್ದಾರೆ.

ನಾಪತ್ತೆಯಾದ ಯುವಕನ ಪೋಷಕರು ಮಗನಿಗಾಗಿ ಚಾರ್ಮಾಡಿಘಾಟ್, ಕೊಟ್ಟಿಗೆಹಾರ, ಬಣಕಲ್ ಸೇರಿದಂತೆ ಹಲವೆಡೆ ತೀವ್ರ ಹುಡುಕಾಟ ನಡೆಸಿದ್ದಾರೆ. ಆ ದಾರಿಯಾಗಿ ಸಂಚರಿಸುವ ವಾಹನಗಳನ್ನು ತಪಾಸಣೆ ಮಾಡಿದ್ದಾರೆ. ಸರ್ಕಾರಿ ಬಸ್‌ಗಳಲ್ಲೂ ಹುಡುಕಾಟ ನಡೆಸಿದ್ದಾರೆ. ಆದರೆ ಯುವಕ ಮಾತ್ರ ಪತ್ತೆಯಾಗಿಲ್ಲ.

Leave a Reply

Your email address will not be published. Required fields are marked *

You may have missed

error: Content is protected !!