March 21, 2026

ಪುತ್ತೂರು: ರಾಜ್ಯ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಇಬ್ಬರು ವಿದ್ಯಾರ್ಥಿಗಳಿಂದ ಸಾಧನೆ: ವಿಟ್ಲದಲ್ಲಿ ತರಬೇತಿ ಪಡೆದಿದ್ದ ವಿದ್ಯಾರ್ಥಿಗಳು

0
IMG-20230220-WA0046.jpg

ಪುತ್ತೂರು: ಚಿಕ್ಕಮಗಳೂರು ಜಿಲ್ಲೆಯ ಕೊಪ್ಪದಲ್ಲಿ ನಡೆದ ರಾಜ್ಯಮಟ್ಟದ ಓಫನ್ ಕರಾಟೆ ಸ್ಪರ್ಧೆಯಲ್ಲಿ ಪುತ್ತೂರಿನ ಇಬ್ಬರು ವಿದ್ಯಾರ್ಥಿಗಳು ಸಾಧನೆ ಮಾಡಿದ್ದಾರೆ.

ರಿಶೋನ್ ಲಸ್ರಾದೊ ಕುಮಿಟೆ ವಿಭಾಗದಲ್ಲಿ ತೃತೀಯ ಮತ್ತು ರಿಯೋನ್ ಲಸ್ರಾದೋ ಕುಮಿಟೆ ವಿಭಾಗದಲ್ಲಿ ದ್ವಿತೀಯ ಸ್ಥಾನ ಪಡೆದಿರುತ್ತಾರೆ. ಇವರು ಬಂಟ್ವಾಳ ತಾಲೂಕಿನ ಕೆದಿಲ ಗ್ರಾಮದ ಪಾಟ್ರಕೋಡಿ ನಿವಾಸಿಗಳಾದ ರೋಶನ್ ಲಸ್ರಾದೋ ಮತ್ತು ಸುಶಾಂತಿ ರೋಡ್ರಿಗಸ್ ದಂಪತಿಗಳ ಪುತ್ರರಾಗಿದ್ದು, ಪುತ್ತೂರು ಬೆಂಥನಿ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳಾಗಿದ್ದಾರೆ. ವಿಟ್ಲದ ಮಾಧವ ಮತ್ತು ರೋಹಿತ್ ಎಸ್ ಎನ್ ಅವರಿಂದ ಕರಾಟೆ ತರಬೇತಿ ಪಡೆದಿರುತ್ತಾರೆ.

Leave a Reply

Your email address will not be published. Required fields are marked *

You may have missed

error: Content is protected !!