ಹುಚ್ಚು ನಾಯಿ ದಾಳಿ: ಐವರು ವಿದ್ಯಾರ್ಥಿಗಳು ಸೇರಿ 6 ಮಂದಿಗೆ ಗಾಯ
ಹೈದರಾಬಾದ್: ಜಿಲ್ಲೆಯ ಮರಿಯಮ್ಮನಹಳ್ಳಿ ಪಟ್ಟಣದ 12ನೇ ವಾರ್ಡಿನಲ್ಲಿ ಹುಚ್ಚು ನಾಯಿಯೊಂದು ದಾಳಿ ಮಾಡಿದ ಪರಿಣಾಮ ಐವರು ವಿದ್ಯಾರ್ಥಿಗಳು ಸೇರಿದಂತೆ 6 ಮಂದಿಗೆ ಗಾಯಗಳಾಗಿವೆ.
ಪಟ್ಟಣದ 12ನೇ ವಾರ್ಡ್ ವ್ಯಾಪ್ತಿಯಯಲ್ಲಿನ ನವೋದಯ ಕೋಚಿಂಗ್ ಮುಗಿಸಿ ಮನೆಗೆ ತೆರಳುವ ವಿದ್ಯಾರ್ಥಿಗಳು ಸೇರಿದಂತೆ ಹಲವು ಜನರ ಮೇಲೆ ಹುಚ್ಚು ನಾಯಿಯು ಏಕಾಏಕಿ ದಾಳಿ ನಡೆಸಿದೆ.
ದಾರಿ ಮಧ್ಯೆ ಸಿಕ್ಕ ಸಿಕ್ಕವರ ಮೇಲೆ ಎರಗಿದ ನಾಯಿಯು ಬೆನ್ನು, ತೊಡೆ, ಕೈ, ಕಾಲು, ಮುಖದ ಭಾಗಕ್ಕೆ ಕಚ್ಚಿದೆ. ನಂತರ ಬೀದಿ ನಾಯಿಗಳಿಗೆ ಕಚ್ಚಿದೆ. ಘಟನೆ ಕಂಡ ಸ್ಥಳೀಯರು ವಿದ್ಯಾರ್ಥಿಗಳನ್ನು ಬಿಡಿಸಿಕೊಂಡು ಹುಚ್ಚುನಾಯಿಯನ್ನು ಹೊಡೆದು ಹಾಕಿದ್ದಾರೆ.
ನಾಯಿ ಕಡಿತದಿಂದ ಗಾಯಗೊಂಡಿರುವವರನ್ನು ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಪ್ರಥಮ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಹೊಸಪೇಟೆ ನೂರು ಹಾಸಿಗೆ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ.ಸದ್ಯ ಗಾಯಾಳುಗಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಇತ್ತೀಚಿಗೆ ಪಟ್ಟಣದಲ್ಲಿ ಬೀದಿ ನಾಯಿಗಳ ಹಾವಳಿ ಹೆಚ್ಚಿರುವುದರಿಂದ ಜನರು ಹಾಗೂ ಶಾಲಾ ಕಾಲೇಜು ವಿದ್ಯಾರ್ಥಿಗಳು ಮನೆಯಿಂದ ಹೊರ ಬಂದು ಓಡಾಡಲು ಭಯಪಡುವಂತಾಗಿದೆ. ನಾಯಿಗಳನ್ನು ಹಿಡಿಯಬೇಕೆಂದು ಸ್ಥಳೀಯರು ಪ ಟ್ಟಣ ಪಂಚಾಯತ್ನ ಅಧಿಕಾರಿಗಳು ಮನವಿ ಮಾಡಿದ್ದಾರೆ.





