December 15, 2025

ಪುತ್ತೂರು| KSRTC ನಿರ್ವಾಹಕಿಗೆ ಪ್ರಯಾಣಿಕನಿಂದ ಹಲ್ಲೆ: ಆಸ್ಪತ್ರೆಗೆ ದಾಖಲು

0
image_editor_output_image-124028339-1676956626113.jpg

ಪುತ್ತೂರು: ಕರ್ತವ್ಯ ನಿರತ ಕೆಎಸ್‌ಆರ್‌ಟಿಸಿ ನಿರ್ವಾಹಕಿಗೆ ಪ್ರಯಾಣಿಕನೋರ್ವ ಬಸ್‌ನಲ್ಲಿಯೇ ಹಲ್ಲೆ ನಡೆಸಿದ ಘಟನೆ ಮಹಾವೀರ ಆಸ್ಪತ್ರೆ ಬಳಿ ನಡೆದಿದೆ.

ನಿರ್ವಾಹಕಿ ವಿಜಯ ಎಂಬವರು ಹಲ್ಲೆಗೊಳಗಾಗಿದ್ದು, ಅದೇ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಹಸನ್‌ ಎಂಬಾತ ಹಲ್ಲೆ ನಡೆಸಿದ ವ್ಯಕ್ತಿ ಎಂದು ಆರೋಪಿಸಲಾಗಿದೆ.

ಮಂಗಳೂರು-ಪುತ್ತೂರು ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಕರ್ತವ್ಯದಲ್ಲಿದ್ದಾಗ ಬಸ್‌ನಲ್ಲಿದ್ದ ವಿಕಲಾಂಗ ಪ್ರಯಾಣಿಕರೋರ್ವರಿಗೆ ಸೀಟು ಬಿಟ್ಟು ಕೊಡುವಂತೆ ಕೇಳಿದಾಗ ಆಕ್ಷೇಪಿಸಿದ ಹಸನ್ ನನ್ನ ಮೇಲೆ ಹಲ್ಲೆ ನಡೆಸಿ ಪರಾರಿಯಾಗಿರುವುದಾಗಿ , ಪುತ್ತೂರು ಆಸ್ಪ ತ್ರೆಯಲ್ಲಿ ದಾಖಲಾಗಿರುವ ಗಾಯಾಳು ನಿರ್ವಾಹಕಿ ವಿಜಯ ಆರೋಪಿಸಿದ್ದಾರೆ.

ಈ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಲಾಗಿದೆ ಎಂದು ತಿಳಿದುಬಂದಿದೆ.

Leave a Reply

Your email address will not be published. Required fields are marked *

error: Content is protected !!