ವಿಟ್ಲ: ನ. 21 ರಂದು ಲಯನ್ಸ್ ಜಿಲ್ಲಾ ಕ್ರೀಡಾಕೂಟ
ವಿಟ್ಲ: ವಿಟ್ಲ ಲಯನ್ಸ್ ಕ್ಲಬ್ ಮತ್ತು ಲಿಯೋ ಕ್ಲಬ್ ಇದರ ಆಥಿತ್ಯದಲ್ಲಿ ಲಯನ್ಸ್ ಜಿಲ್ಲಾ ಕ್ರೀಡಾಕೂಟ ನ.21 ರಂದು ಭಾನುವಾರ ವಿಟ್ಲದ ವಿಠಲ ಪದವಿಪೂರ್ವ ಕಾಲೇಜಿನಲ್ಲಿ ನಡೆಯಲಿದೆ ಎಂದು ವಿಟ್ಲ ಲಯನ್ಸ್ ಕ್ಲಬ್ ಅಧ್ಯಕ್ಷ ಮೋನಪ್ಪ ಗೌಡ ತಿಳಿಸಿದರು.
ವಿಟ್ಲದಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಅಂತಾರಾಷ್ಟ್ರೀಯ ಲಯನ್ಸ್ ಕ್ಲಬ್‌ನಲ್ಲಿ ೧೦೯ ಕ್ಲಬ್‌ಗಳಿವೆ. ವಿಟ್ಲ ಲಯನ್ಸ್ ಕ್ಲಬ್ ೫೦ನೇ ವರ್ಷದ ಸಂಭ್ರಮದಲ್ಲಿದ್ದು, ಸುವರ್ಣ ಮಹೋತ್ಸವ ಆಚರಿಸಲಿದೆ. ೪೦೦ಕ್ಕಿಂತಲೂ ಅಧಿಕ ಕ್ರೀಡಾಪಟುಗಳು ಈ ಕ್ರೀಡೆಯಲ್ಲಿ ಭಾಗವಹಿಸಲಿದೆ ಎಂದು ಹೇಳಿದರು.
ಲಯನ್ಸ್ ಜಿಲ್ಲಾ ಕ್ರೀಡಾ ವಿಭಾಗದ ಕೋ ಆರ್ಡಿನೇಟರ್ ಸಂತೋಷ್ ಕುಮಾರ್ ಶೆಟ್ಟಿ ಪೆಲ್ತಡ್ಕ ಮಾತನಾಡಿ ವಿಟ್ಲದಲ್ಲಿ ಪ್ರಪ್ರಥಮ ಬಾರಿಗೆ ಜಿಲ್ಲಾ ಕ್ರೀಡಾಕೂಟವನ್ನು ಆಯೋಜಿಸಿದ್ದು, ಬೆಳಿಗ್ಗೆ ೭ ಗಂಟೆಯಿಂದ ೬.೩೦ ವರೆಗೆ ಕ್ರೀಡಾಕೂಟ ನಡೆಯಲಿದೆ. ಕ್ರೀಡಾಕೂಟವನ್ನು ಜಿಲ್ಲಾ ಗವರ್ನರ್ ವಸಂತಕುಮಾರ್ ಶೆಟ್ಟಿ ಉದ್ಘಾಟಿಸಲಿದ್ದಾರೆ. ಪ್ರಥಮ ಉಪರಾಜ್ಯಪಾಲ ಸಂಜೀತ್ ಶೆಟ್ಟಿ, ದ್ವಿತೀಯ ಉಪರಾಜ್ಯಪಾಲ ಮೆಲ್ವಿನ್ ಡಿಸೋಜ, ವಿಠಲ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಆದರ್ಶ ಚೊಕ್ಕಾಡಿ, ವಿಠಲ ಪ್ರೌಢ ಶಾಲಾ ಮುಖ್ಯ ಶಿಕ್ಷಕ ಕಿರಣ್ ಕುಮಾರ್ ಬ್ರಹ್ಮಾವರ ಮೊದಲಾದವರು ಭಾಗವಹಿಸಲಿದ್ದಾರೆ ಎಂದು ಮಾಹಿತಿ ನೀಡಿದರು.





