March 21, 2026

ಮೋದಿಯನ್ನು ಹೊಗಳಿದ್ದ ಕನ್ನಡದ ಖ್ಯಾತ ನಟ ಅನಂತ್ ನಾಗ್ ಇಂದು BJP ಸೇರ್ಪಡೆ

0
image_editor_output_image1172469465-1677044230041.jpg

ಬೆಂಗಳೂರು: ಕನ್ನಡದ ಹಿರಿಯ ನಟ ಅನಂತ್ ನಾಗ್ ಇಂದು ಅಧಿಕೃತವಾಗಿ ಭಾರತೀಯ ಜನತಾ ಪಕ್ಷ ಸೇರಲಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಬಿಜೆಪಿ ಆಡಳಿತ ಸರಕಾರದ ಕಾರ್ಯಗಳನ್ನು ಈವರೆಗೂ ಬೆಂಬಲಿಸುತ್ತಾ ಬಂದಿದ್ದ ಅನಂತ್ ನಾಗ್, ಬಿಜೆಪಿ ಸೇರ್ಪಡೆ ಆಗಲಿದ್ದಾರೆ ಎನ್ನುವ ಸುದ್ದಿ ಇತ್ತು. ಅದು ಈಗ ನಿಜವಾಗಿದೆ.

ಇಂದು ಸಂಜೆ 4.30ಕ್ಕೆ ಬೆಂಗಳೂರಿನ ಮಲ್ಲೇಶ್ವರಂ ಬಿಜೆಪಿ ಕಚೇರಿಯಲ್ಲಿ ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರ ಸಮ್ಮುಖದಲ್ಲಿ ಅವರು ಪಕ್ಷವನ್ನು ಸೇರುತ್ತಿದ್ದಾರೆ.

ಈ ಸಂದರ್ಭದಲ್ಲಿ ನಿರ್ಮಾಪಕ, ಸಚಿವ ಮುನಿರತ್ನ ಸೇರಿದಂತೆ ಹಲವು ಗಣ್ಯರು ಉಪಸ್ಥಿತಿ ಇರಲಿದ್ದಾರೆ.

Leave a Reply

Your email address will not be published. Required fields are marked *

You may have missed

error: Content is protected !!