March 21, 2026

ಉಮ್ರಾ ಯಾತ್ರೆಗೆ ತೆರಳಿದ ಕರ್ನಾಟಕದ ಐವರು ಅಪಘಾತದಲ್ಲಿ ಮೃತ್ಯು

0
inbound5732554573421580304.jpg

ಸೌದಿ ಅರೇಬಿಯಾ: ಮಕ್ಕಾದಲ್ಲಿ ಉಮ್ರಾ ಯಾತ್ರೆ ನಿರ್ವಹಿಸಿ ಮದೀನಾಕ್ಕೆ ತೆರಳುತ್ತಿದ್ದ ಬಸ್ಸೊಂದು ಟ್ರಕ್ ಗೆ ಡಿಕ್ಕಿ ಹೊಡೆದು ಅಪಘಾತಕ್ಕೀಡಾಗಿ ಕರ್ನಾಟಕ ಮೂಲದ ಐವರು ಮೃತಪಟ್ಟಿರುವ ಘಟನೆ ನಿನ್ನೆ ರಾತ್ರಿ ನಡೆದಿದೆ.

ಮೃತಪಟ್ಟವರನ್ನು ಕಲಬುರಗಿಯ ಜಿಲ್ಲೆಯ ನೂರ್ ಬಾಗ್ ನಿವಾಸಿ ಶಫೀದ್ ಹುಸೈನ್, ಝೈನುದ್ದೀನ್ ಸಾಹೇಬ್, ರೆಹನಾ ಬೇಗಮ್, ಬಡೇಜಾನ್ ಸುಲ್ಲದ್, ಸಿರಾಜ್ ಬೇಗಮ್ ಸುಲ್ಲದ್, ಸಮೀರ್ ಸುಲ್ಲದ್ ಎಂದು ಗುರುತಿಸಲಾಗಿದೆ.

ಹಜ್ ಮತ್ತು ಉಮ್ರಾ ಟೂರ್ ಆ್ಯಂಡ್ ಟ್ರಾವೆಲ್ಸ್ ಮೂಲಕ ಮಕ್ಕಾ ಮತ್ತು ಮದೀನಕ್ಕೆ ಉಮ್ರಾ ಪ್ರವಾಸ ಕೈಗೊಂಡಿದ್ದರು. ಉಮ್ರಾ ನಿರ್ವಹಿಸಿ ನಿನ್ನೆ ರಾತ್ರಿ ಬಸ್ ಮೂಲಕ ಮಕ್ಕಾದಿಂದ ಮದೀನಾಕ್ಕೆ ಹೋಗುವಾಗ ಬಸ್, ಟ್ರಕ್ ಗೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ ಐವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಮತ್ತು ಹಲವರು ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ.

Leave a Reply

Your email address will not be published. Required fields are marked *

You may have missed

error: Content is protected !!