ಬ್ಯಾಂಕ್ ಫ್ಲ್ಯಾಷ್‌ಪಾಯಿಂಟ್ ಸಿಟಿ ಮೇಲೆ ಇಸ್ರೇಲಿ ಪಡೆಗಳಿಂದ ದಾಳಿ: 11 ಪ್ಯಾಲೆಸ್ತೀನಿಯನ್ನರ ಹತ್ಯೆ, 100ಕ್ಕೂ ಹೆಚ್ಚು ಮಂದಿಗೆ ಗಾಯ

ನಬ್ಲಸ್: ಇಸ್ರೇಲಿ ಪಡೆಗಳು ಬುಧವಾರ ವೆಸ್ಟ್ ಬ್ಯಾಂಕ್ ಫ್ಲ್ಯಾಷ್‌ಪಾಯಿಂಟ್ ಸಿಟಿ ಮೇಲೆ ನಡೆಸಿದ ದಾಳಿಯಲ್ಲಿ 11 ಪ್ಯಾಲೆಸ್ತೀನಿಯನ್ನರ ಹತ್ಯೆ ಮಾಡಲಾಗಿದೆ ಎಂದು ವರದಿಯಾಗಿದೆ.
ಘಟನೆಯಲ್ಲಿ ಸುಮಾರು 100 ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ ಎಂದು ವೈದ್ಯಕೀಯ ಅಧಿಕಾರಿಗಳು ತಿಳಿಸಿದ್ದಾರೆ.
ನಬ್ಲಸ್ ನಗರದಲ್ಲಿ ಕಾರ್ಯಾಚರಣೆಯಲ್ಲಿ ನಡೆಸಲಾಗಿದೆ ಎಂದು ಇಸ್ರೇಲ್ ರಕ್ಷಣಾ ವಲಯ ಮಾಹಿತಿ ನೀಡಿದೆ. ಇಸ್ರೇಲಿ ಸೇನೆಯಲ್ಲಿ ಯಾರಿಗೂ ಹಾನಿ ಸಂಭವಿಸಿಲ್ಲ ಎನ್ನಲಾಗಿದೆ.