February 2, 2026

ಉಳ್ಳಾಲ: ಕೆಟ್ಟು ನಿಂತ ಲಾರಿಗೆ ಎರಡು ದ್ವಿಚಕ್ರ ವಾಹನಗಳು ಢಿಕ್ಕಿ: ಓರ್ವ ಮೃತ್ಯು, ಇಬ್ಬರಿಗೆ ಗಾಯ

0
IMG-20230223-WA0013.jpg

ಉಳ್ಳಾಲ: ಕೆಟ್ಟು ನಿಂತ ಲಾರಿಗೆ ಎರಡು ಸ್ಕೂಟರ್ ಗಳು ಢಿಕ್ಕಿ ಹೊಡೆದು ಒಂದು ಸ್ಕೂಟರಿನಲ್ಲಿದ್ದ ಸವಾರ ಸಾವನ್ನಪ್ಪಿ ಸಹಸವಾರ ಗಂಭೀರ ಗಾಯಗೊಂಡು, ಇನ್ನೊಂದು ಸ್ಕೂಟರಿನಲ್ಲಿದ್ದ ಸವಾರ ಗಾಯಗೊಂಡ ಘಟನೆ ನೇತ್ರಾವತಿ ಸೇತುವೆಯಲ್ಲಿ ಇಂದು ನಸುಕಿನ ಜಾವ ಸಂಭವಿಸಿದೆ.

ಅಂಗರಗುಂಡಿ ನಿವಾಸಿ ಮೊಹಮ್ಮದ್ ನೌಫಾಲ್ (26) ಸಾವನ್ನಪ್ಪಿದವರು. ಸಹಸವಾರ ಉಮ್ಮರ್ ಫಾರುಕ್ ಎಂಬವರು ಗಾಯಗೊಂಡಿರುವುದಾಗಿ ತಿಳಿದುಬಂದಿದೆ.

ಇನ್ನೊಂದು ಸ್ಕೂಟರಿನಲ್ಲಿದ್ದ ಗಾಯಾಳುಗಳ ವಿವರ ತಿಳಿದುಬಂದಿಲ್ಲ.

ಇಬ್ಬರೂ ಕಲ್ಲಾಪು ಗ್ಲೋಬಲ್ ಮಾರುಕಟ್ಟೆಗೆ ತರಕಾರಿ ವ್ಯಾಪಾರದ ಹಿನ್ನೆಲೆಯಲ್ಲಿ ಪಂಪ್ವೆಲ್ ಕಡೆಯಿಂದ ತೊಕ್ಕೊಟ್ಟು ಕಡೆಗೆ ತೆರಳುತ್ತಿದ್ದ ಸಂದರ್ಭ ಘಟನೆ ಸಂಭವಿಸಿದೆ. ಒಂದು ಸ್ಕೂಟರ್ ಢಿಕ್ಕಿ ಹೊಡೆದ ಕೆಲವೇ ನಿಮಿಷಗಳಲ್ಲಿ ಇನ್ನೊಂದು ಸ್ಕೂಟರ್ ಕೂಡ ಢಿಕ್ಕಿ ಹೊಡೆದಿದೆ.

ಮಂಗಳೂರು ದಕ್ಷಿಣ ಸಂಚಾರಿ ಪೊಲೀಸ್ ಠಾಣೆಯವರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Leave a Reply

Your email address will not be published. Required fields are marked *

error: Content is protected !!