ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ವರ್ಗಾವಣೆ

ಮಂಗಳೂರು: ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ಅವರನ್ನು ರೈಲ್ವೆ ಡಿಐಜಿಯಾಗಿ ತಕ್ಷಣಕ್ಕೆ ಜಾರಿಗೆ ಬರುವಂತೆ ರಾಜ್ಯ ಸರ್ಕಾರ ವರ್ಗಾವಣೆಗೊಳಿಸಿ ಆದೇಶ ಹೊರಡಿಸಿದೆ.
ಬೆಂಗಳೂರು ಪಶ್ಚಿಮ ಸಂಚಾರ ವಿಭಾಗದ ಡಿಸಿಪಿಯಾಗಿರುವ ಕುಲದೀಪ್ ಕುಮಾರ್ ಆರ್.ಜೈನ್ ಅವರನ್ನು ಮಂಗಳೂರು ನಗರ ನೂತನ ಪೊಲೀಸ್ ಆಯುಕ್ತರ ಹುದ್ದೆಗೆ ನೇಮಕ ಮಾಡುವಂತೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.