March 21, 2026

ಕಡಬ: ಕಾಡಾನೆ ಹಿಡಿದು ತೆರಳುತ್ತಿದ್ದ ಅರಣ್ಯ ಅಧಿಕಾರಿಗಳ, ಪೊಲೀಸರ ಮೇಲೆ ಹಲ್ಲೆ: ವಾಹನಗಳ ಗಾಜು ಪುಡಿಪುಡಿ

0
IMG-20230224-WA0006.jpg

ಕಡಬ: ಕಾಡಾನೆ ಹಿಡಿದು ತೆರಳುತ್ತಿದ್ದ ಅರಣ್ಯ ಅಧಿಕಾರಿಗಳ, ಪೊಲೀಸರ ಮೇಲೆ ಹಲ್ಲೆ ನಡೆಸಿರುವ ಘಟನೆ ವರದಿಯಾಗಿದೆ. ಆಕ್ರೋಶಗೊಂಡ ಸ್ಥಳೀಯ ಕೆಲವರು ಈ ಕೃತ್ಯ ಎಸಗಿರುವ ಶಂಕೆ ವ್ಯಕ್ತವಾಗಿದೆ.

ಪೊಲೀಸ್ ಇಲಾಖಾ ವಾಹನಗಳಿಗೆ ಕಲ್ಲು ತೂರಾಟ ನಡೆದಿದೆ. ಡಿವೈಎಸ್ಪಿ, ಅರಣ್ಯ ಸಿಬ್ಬಂದಿಗಳ ಮೇಲೆ ಹಲ್ಲೆ ನಡೆಸಲಾಗಿದೆ. ಒಂದು ಆನೆ ಹಿಡಿದಿದ್ದೀರೀ ಎಂದು ಹೇಳಿಕೊಂಡು ಹಲ್ಲೆ ನಡೆಸಲಾಗಿದೆ ಎಂದು ತಿಳಿದುಬಂದಿದೆ. ಕಾರ್ಯಾಚರಣೆ ನಿಲ್ಲಿಸಿಲ್ಲ ನಾಳೆ ಬರುತ್ತೇವೆ ಎಂದರೂ ಕೇಳದೇ ಕಲ್ಲು ತೂರಾಟ ಮಾಡಲಾಗಿದೆ ಎಂದು ತಿಳಿದುಬಂದಿದೆ.

ಇನ್ನು ಘಟನೆಯಲ್ಲಿ ಎರಡು ಪೋಲಿಸ್ ಜೀಪ್, ಅರಣ್ಯ ಇಲಾಖೆಯ ಒಂದು ಜೀಪ್, ರೇಂಜರ್ ಒಬ್ಬರ ಬ್ರೀಝಾ ಗಾಡಿಗಳು ಜಖಂಗೊಂಡಿದೆ.

Leave a Reply

Your email address will not be published. Required fields are marked *

You may have missed

error: Content is protected !!