ವಿಟ್ಲ: ಮಾಣಿ ಅಪಘಾತ ವಿಚಾರದಲ್ಲಿ ಘರ್ಷಣೆ:
ಬಂಧಿತ ಇಬ್ಬರು ಆರೋಪಿಗಳಿಗೆ ಜಾಮೀನು
ಬಂಟ್ವಾಳ: ಎರಡು ತಂಡಗಳ ಮಧ್ಯೆ ಗಲಾಟೆ ಪ್ರಕರಣದಲ್ಲಿ ಬಂಧಿತರಾಗಿ ನ್ಯಾಯಾಂಗ ಬಂಧನದಲ್ಲಿದ್ದ ಇಬ್ಬರು ಆರೋಪಿಗಳಿಗೆ ಜಾಮೀನು ಮಂಜೂರಾಗಿದೆ.
ಕೆಲ ದಿನಗಳ ಹಿಂದೆ ಬಂಟ್ವಾಳ ತಾಲೂಕಿನ ಮಾಣಿ ಎಂಬಲ್ಲಿ ಸೈಡ್ ಕೊಡುವ ಬರದಲ್ಲಿ ದ್ವಿಚಕ್ರ ವಾಹನಕ್ಕೆ ಡಿಕ್ಕಿಯಾದ ಅನಂತರ ನಡೆದ ಗಲಾಟೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ವಿಟ್ಲ ಠಾಣೆಯ ಪೊಲೀಸರ ದೂರಿನ ಆಧಾರದಲ್ಲಿ ಪೋಲೀಸರ ಕರ್ತವ್ಯಕ್ಕೆ ಅಡ್ಡಿ ಪಡಿಸಿದ ಆರೋಪದಲ್ಲಿ 20-30 ಮಂದಿಯ ಮೇಲೆ ಪ್ರಕರಣ ದಾಖಲಾಗಿದ್ದು, ಘಟನೆಯ ಮುಂದುವರಿದ ಭಾಗವಾಗಿ ಸೂರಿಕುಮೇರು ನಿವಾಸಿ ಮಹಮ್ಮದ್ ಹನೀಫ್ ಮತ್ತು ಜಗದೀಶ ಎಂಬವರನ್ನು ವಿಟ್ಲ ಪೊಲೀಸರು ಬಂಧಿಸಿದ್ದರು. ಪೊಲೀಸರ ಕ್ರಮದ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಆಕ್ರೋಶ ವ್ಯಕ್ತವಾಗಿತ್ತು.
ಜಾಮೀನಿನ ಅರ್ಜಿ ವಿಚಾರಣೆ ನಡೆಸಿದ ಬಂಟ್ವಾಳ ನ್ಯಾಯಾಲಯ ಆರೋಪಿಗಳಿಗೆ ಷರತ್ತುಬದ್ಧ ಜಾಮೀನು ನೀಡಿ ಆದೇಶ ಹೊರಡಿಸಿದೆ.





