March 21, 2026

ರೈಲ್ವೆ ಹಳಿಗಳ ಮೇಲೆ ನಿಂತು ಮೊಬೈಲ್‌ನಲ್ಲಿ ವಿಡಿಯೋ ಚಿತ್ರೀಕರಣ: ರೈಲಿಗೆ ಸಿಲುಕಿ ಇಬ್ಬರು ಯುವಕರು ಸಾವು

0
Screenshot_2023-02-24-14-05-38-06_680d03679600f7af0b4c700c6b270fe7.jpg

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯ ಕಾಂತಿ ನಗರ ಮೇಲ್ಸೇತುವೆ ಬಳಿ ರೈಲ್ವೆ ಹಳಿಗಳ ಮೇಲೆ ನಿಂತು ಮೊಬೈಲ್‌ನಲ್ಲಿ ವಿಡಿಯೊ ಚಿತ್ರೀಕರಿಸುತ್ತಿದ್ದ ಇಬ್ಬರು ಯುವಕರು ರೈಲಿಗೆ ಸಿಲುಕಿ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಮೃತರನ್ನು ಅಂತಿಮ ವರ್ಷದ ಬಿಟೆಕ್ ವಿದ್ಯಾರ್ಥಿ ವಂಶ್ ಶರ್ಮಾ (23) ಮತ್ತು ಸೇಲ್ಸ್‌ಮ್ಯಾನ್ ಮೋನು (20) ಎಂದು ಗುರುತಿಸಲಾಗಿದೆ. ಇಬ್ಬರೂ ಕಾಂತಿ ನಗರದ ನಿವಾಸಿಗಳಾಗಿದ್ದಾರೆ.

‘ಯುವಕರು ಮೊಬೈಲ್‌ನಲ್ಲಿ ಕಿರುಚಿತ್ರಗಳನ್ನು ಚಿತ್ರೀಕರಿಸುತ್ತಿದ್ದು, ಆಗಾಗ ಲೈವ್ ವಿಡಿಯೊಗಳನ್ನು ಮಾಡಲು ರೈಲ್ವೆ ಹಳಿಗಳ ಬಳಿ ಬರುತ್ತಿದ್ದರು ಎಂಬುದು ವಿಚಾರಣೆ ವೇಳೆ ತಿಳಿದುಬಂದಿದೆ. ಘಟನೆ ನಡೆದ ಸಂದರ್ಭದಲ್ಲಿ ಅವರ ಮೊಬೈಲ್‌ಗಳು ರೈಲ್ವೆ ಟ್ರ್ಯಾಕ್‌ನಲ್ಲಿ ಪತ್ತೆಯಾಗಿವೆ’ ಎಂದು ಪೊಲೀಸರು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

You may have missed

error: Content is protected !!