November 21, 2024

ಮದುವೆಯಲ್ಲಿ  ನೃತ್ಯ  ಮಾಡುತ್ತಿದ್ದ ವೇಳೆ ಕುಸಿದು ಬಿದ್ದು ಯುವಕ ಸಾವು

0

ಹೈದರಾಬಾದ್: ಯುವಕನೊಬ್ಬ ಸಂಬಂಧಿಕರ ಮದುವೆಯಲ್ಲಿ ನೃತ್ಯ ಮಾಡುತ್ತಿದ್ದ ವೇಳೆ ಕುಸಿದು ಬಿದ್ದು ಸಾವನ್ನಪ್ಪಿದ ಘಟನೆ ತೆಲಂಗಾಣದಲ್ಲಿ ನಡೆದಿದೆ.

ಮಹಾರಾಷ್ಟ್ರ ಮೂಲದ ಮುತ್ಯಂ (19) ಮೃತ ಯುವಕ. ತೆಲಂಗಾಣದ ನಿರ್ಮಲ್ ಜಿಲ್ಲೆಯ ಪಾರ್ಡಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಮುತ್ಯುಂ ಸಂಬಂಧಿಕರ ವಿವಾಹ ಆರತಕ್ಷತೆಯಲ್ಲಿ ನೃತ್ಯ ಮಾಡುತ್ತಿದ್ದ.

ಈ ವೇಳೆ ಆತ ಇದ್ದಕ್ಕಿದ್ದಂತೆ ಕುಸಿದು ಬಿದ್ದು ಪ್ರಜ್ಞೆ ತಪ್ಪಿದ್ದಾನೆ. ತಕ್ಷಣ ಮದುವೆಯಲ್ಲಿ ನೆರೆದಿದ್ದ ಅತಿಥಿಗಳು ಮುತ್ಯಂನನ್ನು ಭೈಂಸಾ ಏರಿಯಾ ಆಸ್ಪತ್ರೆಗೆ ಕರೆದೊಯ್ದಿದ್ದಾರೆ.

ಆದರೆ ಮಾರ್ಗ ಮಧ್ಯೆಯೇ ಮುತ್ಯುಂ ಹೃದಯಾಘಾತದಿಂದ ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದ್ದಾರೆ

Leave a Reply

Your email address will not be published. Required fields are marked *

error: Content is protected !!