ಮಹಿಳಾ ಪಿಎಸ್‌ಐ ಜೊತೆ ಅಸಭ್ಯವಾಗಿ ವರ್ತನೆ: ಯೂತ್ ಕಾಂಗ್ರೆಸ್ ಜಿಲ್ಲಾಧ್ಯಕ್ಷನ ಬಂಧನ

ತುಮಕೂರು: ಮಹಿಳಾ ಪಿಎಸ್‌ಐ ಜೊತೆ ಅಸಭ್ಯವಾಗಿ ವರ್ತಿಸಿದ್ದ ತುಮಕೂರು ಯೂತ್ ಕಾಂಗ್ರೆಸ್ ಜಿಲ್ಲಾ ಅಧ್ಯಕ್ಷ ಶಶಿ ಹುಲಿಕುಂಟೆಯನ್ನು ಪೊಲೀಸರು ಬಂಧಿಸಿದ್ದಾರೆ.
ತುಮಕೂರು ನಗರದ ತಿಲಕ್ ಪಾರ್ಕ್ ಮಹಿಳಾ ಪಿಎಸ್ಐ ಅವರೊಂದಿಗೆ ಅಸಭ್ಯವಾಗಿ ವರ್ತಿಸಿದ ಶಶಿ ಹುಲಿಕುಂಟೆ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾನೆ. ಈ ಹಿನ್ನೆಲೆಯಲ್ಲಿ ಸರ್ಕಾರಿ ಕೆಲಸಕ್ಕೆ ಅಡ್ಡಿ ಹಾಗೂ ಪೊಲೀಸರಿಗೆ ಬೆದರಿಕೆ ಹಾಕಿದ್ದಾರೆ ಎಂಬ ಸೆಕ್ಸನ್ ಅಡಿ ಬಂಧಿಸಲಾಗಿದೆ.
ಪ್ರಕರಣವೊಂದರಲ್ಲಿ ವಶಕ್ಕೆ ಪಡೆದ ನಾಲ್ವರು ಆರೋಪಿಗಳನ್ನು ಬಿಡುಗಡೆ ಮಾಡುವಂತೆ ಶಶಿ ಹುಲಿಕುಂಟೆ ಪೊಲೀಸರಿಗೆ ಧಮಕಿ ಹಾಕಿದ್ದಾನೆ.