March 21, 2026

ಈ ಬಾರಿಯ ಚುನಾವಣೆ ಟಿಪ್ಪು Vs ಸಾವರ್ಕರ್ ನಡುವೆ ಕಟೀಲು ಹೇಳಿಕೆ, ನನ್ನ ಒಪ್ಪಿಗೆ ಇಲ್ಲ: ಬಿಎಸ್ ವೈ

0
image_editor_output_image-518714822-1677477952346.jpg

ಬೆಂಗಳೂರು: ಈ ಬಾರಿ ಕಾಂಗ್ರೆಸ್ ಮತ್ತು ಬಿಜೆಪಿಯ ಬದಲಾಗಿ ಸಾವರ್ಕರ್ ಹಾಗೂ ಟಿಪ್ಪುವಿನ ಸಿದ್ಧಾಂತಗಳ ನಡುವೆ ಚುನಾವಣೆ ನಡೆಯಲಿದೆ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ. ಈ ಹೇಳಿಕೆಯನ್ನು ಶಾಸಕ ಎಂ.ಪಿ. ರೇಣುಕಾಚಾರ್ಯ ಸೇರಿದಂತೆ ಇನ್ನೂ ಕೆಲ ಬಿಜೆಪಿ ನಾಯಕರು ಸಮರ್ಥಿಸಿಕೊಂಡಿದ್ದಾರೆ. ಆದ್ರೆ, ಇದಕ್ಕೆ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಒಪ್ಪಿಗೆ ಇಲ್ಲ ಎಂದಿದ್ದಾರೆ.

ಖಾಸಗಿ ಸುದ್ದಿವಾಹಿನಿ ಜೊತೆಯಲ್ಲಿ ಮಾತನಾಡಿರುವ ಅವರು, ಟಿಪ್ಪು ವರ್ಸಸ್ ಸಾವರ್ಕರ್ ಎಂಬ ಕಟೀಲ್ ಹೇಳಿಕೆಗೆ ನನ್ನ ಒಪ್ಪಿಗೆ ಇಲ್ಲ. ಆದ್ರೆ, ಅದಕ್ಕಿಂತ ಮುಖ್ಯವಾಗಿ ಹೆಚ್ಚು ಪರಿಶ್ರಮಪಡಬೇಕು. ಈ ಚುನಾವಣೆಯು ಬಿಜೆಪಿಯ ನೀತಿಗಳು ಮತ್ತು ಯೋಜನೆಗಳು ನಿರೂಪಣೆಯಾಗಿರುತ್ತದೆ ಎಂದರು.

ರಾಜ್ಯ ಹಾಗೂ ಕೇಂದ್ರ ಸರ್ಕಾರ ಜನಪ್ರಿಯ ಯೋಜನೆಗಳನ್ನು ಮನೆ-ಮನೆಗೆ ತಲುಪಿಸುವುದೇ ಮುಂದಿನ ಚುನಾವಣೆಯ ಮಂತ್ರ. ಇನ್ನು ಜೆಡಿಎಸ್ಗೆ ಫೈಟ್ ಕೊಡಲು ಕಾಂಗ್ರೆಸ್ ಹಾಗೂ ಜೆಡಿಎಸ್ ಕಸರತ್ತು ನಡೆಸಿವೆ. ಆದರೂ ರಾಜ್ಯದಲ್ಲಿ ಬಿಜೆಪಿಗೆ ಬಹುಮತ ಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

Leave a Reply

Your email address will not be published. Required fields are marked *

You may have missed

error: Content is protected !!