ರ್‍ಯಾಗಿಂಗ್: ವೈದ್ಯಕೀಯ ವಿದ್ಯಾರ್ಥಿನಿ ಆತ್ಮಹತ್ಯೆ
ಹೈದರಾಬಾದ್: ರ್‍ಯಾಗಿಂಗ್ ಹಿನ್ನೆಲೆಯಲ್ಲಿ ವೈದ್ಯಕೀಯ ವಿದ್ಯಾರ್ಥಿನಿ ಪ್ರೀತಿ (26) ಆತ್ಮಹತ್ಯೆ ಮಾಡಿಕೊಂಡ ಘಟನೆ ಹೈದರಾಬಾದ್ ನಲ್ಲಿ ನಡೆದಿದೆ.
ಪ್ರೀತಿ ಕಾಕತೀಯ ವೈದ್ಯಕೀಯ ಕಾಲೇಜಿನಲ್ಲಿ ಪ್ರಥಮ ವರ್ಷದ ಸ್ನಾತಕೋತ್ತರ ವೈದ್ಯಕೀಯ ಓದುತ್ತಿದ್ದಳು.
ಈ ವೇಳೆ ಆಕೆ ಸೀನಿಯರ್ ವಿದ್ಯಾರ್ಥಿಗಳಿಂದ ರ್ಯಾಗಿಂಗ್ಗೆ ಒಳಗಾಗಿದ್ದಾಳೆ. ಈ ಹಿನ್ನೆಲೆಯಲ್ಲಿ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆಗೆ ಯತ್ನಿಸಿದ್ದಾಳೆ.
ಗಂಭೀರ ಸ್ಥಿತಿಯಲ್ಲಿದ್ದ ಆಕೆಯನ್ನು ಹೆಚ್ಚಿನ ಚಿಕಿತ್ಸೆಗಾಗಿ ಹೈದರಾಬಾದ್ ಗೆ ದಾಖಲಿಸಲಾಗಿತ್ತು. ಆದರೆ 4 ದಿನಗಳ ನಂತರ ಚಿಕಿತ್ಸೆ ಫಲಕಾರಿಯಾಗದೇ ಆಕೆ ಮೃತಪಟ್ಟಿದ್ದಾಳೆ.