March 20, 2026

ಇಬ್ಬರು ಯುವಕರ ನಡುವಿನ ಜಗಳ ಕೊಲೆಯಲ್ಲಿ ಅಂತ್ಯ

0
image_editor_output_image-1042865520-1677557042656.jpg

ಬೀದರ್: ಹಳೆಯ ದ್ವೇಷಕ್ಕೆ ಯುವಕನನ್ನು ಕತ್ತಿಯಿಂದ ಕಡಿದು ಬರ್ಬರವಾಗಿ ಕೊಲೆ ಮಾಡಿದ ಘಟನೆ ಬೀದರ್ ಜಿಲ್ಲೆಯ ಬಸವಕಲ್ಯಾಣ ಪಟ್ಟಣದ ತ್ರಿಪುರಾಂತ ಬಳಿ ನಡೆದಿದೆ.

ಆನಂದ್‌ ಪುಲೆ (26) ಭೀಕರವಾಗಿ ಕೊಲೆಯಾದ ದುರ್ದೈವಿ. ಇಬ್ಬರು ಯುವಕರ ನಡುವಿನ ಜಗಳ ಕೊಲೆಯಲ್ಲಿ ಅಂತ್ಯವಾಗಿದೆ.

ಉದಯ್ ಹಾಗೂ ಆತನ ಗುಂಪು ಸೇರಿ ಕೊಲೆ ಮಾಡಿರುವ ಆರೋಪ ಕೇಳಿಬರುತ್ತಿದೆ.

ಗುಂಪೊಂದು ನಡು ರಸ್ತೆಯಲ್ಲೇ ಆನಂದ್‌ ಪುಲೆ ಮೇಲೆ ಕತ್ತಿಯಿಂದ ಕಡಿದು ಹಲ್ಲೆ ನಡೆಸಿದೆ.

ಹಲ್ಲೆ ಬಳಿಕ ಗಂಭೀರವಾಗಿ ಗಾಯಗೊಂಡ ಆನಂದ್‌ನನ್ನು ಹೆಚ್ಚಿನ ಚಿಕಿತ್ಸೆಗಾಗಿ ಉಮರ್ಗಾ ಆಸ್ಪತ್ರೆಗೆ ರವಾನೆ‌ ಮಾಡಲಾಗಿತ್ತು.

ಆದರೆ ಆಸ್ಪತ್ರೆಗೆ ಕರೆದೊಯ್ಯುವಾಗ ಮಾರ್ಗಮಧ್ಯೆ ಆನಂದ್‌ ಕೊನೆಯುಸಿರೆಳೆದಿದ್ದಾನೆ.

Leave a Reply

Your email address will not be published. Required fields are marked *

You may have missed

error: Content is protected !!