ಚಿಕ್ಕಮಗಳೂರು: ಕಾಫಿ ತೋಟದಲ್ಲಿ ಮುಳ್ಳುಹಂದಿ ಬೇಟೆಗೆ ತೆರಳಿದ್ದ ಇಬ್ಬರು ಸಾವು
ಚಿಕ್ಕಮಗಳೂರು: ಮೂಲತಃ ತಮಿಳುನಾಡಿನವರು ಕಾಫಿ ತೋಟದ ಕೆಲಸಕ್ಕೆ ಬಂದು ಮುಳ್ಳುಹಂದಿ ಬೇಟೆಗೆ ಹಂದಿಗಳ ಗುಹೆಗೆ ನುಗ್ಗಿ ಉಸಿರುಗಟ್ಟಿ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಮೂಡಿಗೆರೆ ತಾಲೂಕಿನ ಮಾಳಿಗನಾಡು ಗ್ರಾಮದಲ್ಲಿ ನಡೆದಿದೆ.
ಮಾಳಿಗನಾಡು ಸಮೀಪದ ಆನೆಗುಂಡಿ ಎಸ್ಟೇಟ್ನ ಸಮೀಪದ ಬೆಟ್ಟದ ಸುರಂಗದಲ್ಲಿ ಮುಳ್ಳುಹಂದಿ ಹಿಡಿಯುಲು ಹೋದಾಗ ಈ ದುರ್ಘಟನೆ ಸಂಭವಿಸಿದೆ.
ಮೃತರು ತಮಿಳುನಾಡು ಮೂಲದ ಕಾರ್ಮಿಕರೆಂದು ತಿಳಿದುಬಂದಿದೆ. ಮೃತರನ್ನ ಗೋವಿಂದರಾಜು (30) ಹಾಗೂ ವಿಜಯ್ ಕುಮಾರ್ (29) ಎಂದು ಗುರುತಿಸಲಾಗಿದೆ.
ಬೇಟೆಗೆ ಹೋದಾಗ ಮಣ್ಣು ಕುಸಿತವಾದ ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.