September 8, 2024

ಕಾಸರಗೋಡು: KSRTC ಬಸ್ ಹರಿದು ದ್ವಿಚಕ್ರ ವಾಹನ ಸವಾರ ಮೃತ್ಯು

0

ಕಾಸರಗೋಡು: ಕೆಎಸ್ಸಾರ್ಟಿಸಿ ಬಸ್ ಹರಿದ ಪರಿಣಾಮ ದ್ವಿಚಕ್ರ ಸವಾರ ಮೃತಪಟ್ಟ ಘಟನೆ ಮಂಗಳವಾರ ಮಧ್ಯಾಹ್ನ ನಗರದ ಎಂ.ಜಿ. ರಸ್ತೆಯ ಹಳೆ ಬಸ್ ನಿಲ್ದಾಣ ಬಳಿ ನಡೆದಿದೆ.

ಮೊಗ್ರಾಲ್ ಪುತ್ತೂರು ಕಡವತ್ ಮೊಗರಿನ ಮುಹಮ್ಮದ್ ಫಾಸಿಲ್ ತಬ್ಸೀರ್ (23) ಮೃತಪಟ್ಟ ಯುವಕ.

ಸ್ಕೂಟರ್ ನಿಂದ ರಸ್ತೆಗೆ ಎಸೆಯಲ್ಪಟ್ಟ ಫಾಸಿಲ್ ತಬ್ಸೀರ್ ನ ಮೇಲೆ ಕೆಎಸ್ಸಾರ್ಟಿಸಿ ಬಸ್ಸಿನ ಹಿಂಬದಿ ಚಕ್ರ ಹರಿದು ಈ ದುರ್ಘಟನೆ ನಡೆದಿದೆ ಎನ್ನಲಾಗಿದೆ.

ನಗರ ಠಾಣಾ ಪೊಲೀಸರು ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Leave a Reply

Your email address will not be published. Required fields are marked *

error: Content is protected !!