May 10, 2026

ಆಮ್ ಆದ್ಮಿ ಪಕ್ಷ ತೊರೆದು ಬಿಜೆಪಿ ಸೇರಿದ ನಿವೃತ್ತ ಪೊಲೀಸ್ ಅಧಿಕಾರಿ ಭಾಸ್ಕರ ರಾವ್

0
n47616258016776514124152d83dda8ffac33fca8268d639d85f79d78d8755d6921378e4335d15cc67d698d.jpg

ಬೆಂಗಳೂರು: ನಿವೃತ್ತ ಪೊಲೀಸ್ ಅಧಿಕಾರಿ ಭಾಸ್ಕರ ರಾವ್ ಅವರು ಆಮ್ ಆದ್ಮಿ ಪಕ್ಷ ತೊರೆದು ಬಿಜೆಪಿ ಪಕ್ಷದ ಹಿರಿಯ ಪ್ರಭಾವಿ ಮುಖಂಡ ಎನ್.ಶಂಕ್ರಪ್ಪ ನೇತೃತ್ವದಲ್ಲಿ ಕಮಲ ಪಡೆ ಸೇರ್ಪಡೆಗೊಂಡಿದ್ದಾರೆ. ಅವರು ಇಂದು ಮಲ್ಲೇಶ್ಚರಂ ನ ಬಿಜೆಪಿ ಕಛೇರಿಯಲ್ಲಿ ಭಾರತೀಯ ಜನತಾ ಪಕ್ಷ ಸೇರಿದರು.

ರಾಜ್ಯದಲ್ಲಿ ಬಿಜೆಪಿ ಅಲೆ ಇದೆ. ಬಿಜೆಪಿ ಮತ್ತೊಮ್ಮೆ ಅಕಾರಕ್ಕೆ ಬರಬೇಕೆಂಬ ನಿರೀಕ್ಷೆ ಮತ್ತು ಜನಬೆಂಬಲ ಕಾಣುತ್ತಿದೆ. ಮತ್ತೆ ಬಿಜೆಪಿ ಅಧಿಕಾರಕ್ಕೆ ಬರುವುದು ಖಚಿತ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಸಂಸದ ನಳೀನ್‍ಕುಮಾರ್ ಕಟೀಲ್ ವಿಶ್ವಾಸ ವ್ಯಕ್ತಪಡಿಸಿದರು. ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಆಪ್ ಮುಖಂಡರಿಗೆ ಧ್ವಜ ನೀಡಿ, ಶಾಲು ಹಾಕಿ ಪಕ್ಷಕ್ಕೆ ಸೇರ್ಪಡೆ ಮಾಡಿ ಮಾತನಾಡಿದರು.ಪಕ್ಷ ಗಟ್ಟಿ ಮಾಡಿ ರಾಜಕಾರಣದ ಮೂಲಕ ಸೇವೆ ಮಾಡಲು ಬಂದಿದ್ದಾರೆ. ಅವರಿಗೆ ಅಭಿನಂದನೆಗಳು ಎಂದು ತಿಳಿಸಿದರು.

ಬಿಜೆಪಿ ಸೇರಿದ ನಿವೃತ್ತ ಐಪಿಎಸ್ ಅಕಾರಿ ಭಾಸ್ಕರ ರಾವ್ ಅವರು ಮಾತನಾಡಿ, ಮತ್ತೆ ಸನಾತನ ಧರ್ಮಕ್ಕೆ ಸೇರಿದ ಪಕ್ಷ, ರಾಷ್ಟ್ರೀಯತೆ ಮೈಗೂಡಿಸಿಕೊಂಡ ಪಕ್ಷಕ್ಕೆ ಸೇರಿದ್ದೇನೆ. ನಾನು ಬಾಲ್ಯಕಾಲದಿಂದ ಸನಾತನ ಧರ್ಮ, ರಾಷ್ಟ್ರೀಯತೆಗೆ ಬದ್ಧನಾಗಿದ್ದವ. ಆಮ್ ಆದ್ಮಿ ಪಕ್ಷದಲ್ಲಿ ಒಂದು ವರ್ಷ ಇದ್ದರೂ ಅದು ರಾಜ್ಯದಲ್ಲಿ ಬೆಳೆಯುವ ಸಾಧ್ಯತೆ ಕಡಿಮೆ ಅನಿಸಿತು ಎಂದು ತಿಳಿಸಿದರು.

ಮೋದಿಜಿ, ಅಮಿತ್ ಶಾ, ಜೆ.ಪಿ.ನಡ್ಡಾ, ಬಿ.ಎಲ್.ಸಂತೋಷ್, ಯಡಿಯೂರಪ್ಪ, ಕಟೀಲ್, ಪ್ರಹ್ಲಾದ್ ಜೋಶಿ ಅವರ ಪಕ್ಷದ ಜೊತೆ ಇರಲು ಬಂದಿದ್ದೇನೆ. ಪಕ್ಷದ ಕಾರ್ಯಕ್ರಮಗಳಿಗೆ ಸಹಕರಿಸುವೆ. ಅಖಂಡ ಭಾರತವನ್ನು ಗಟ್ಟಿಯಾಗಿ ಇಡಲು ಇದೊಂದೇ ಪಕ್ಷದಿಂದ ಸಾಧ್ಯ ಎಂದರು.ಪಕ್ಷ ಕಟ್ಟುವಾಗ ಯುವಕರು, ಮಹಿಳೆಯರಿಗೆ ಆದ್ಯತೆ ಕೊಡುವುದು ಖುಷಿ ಕೊಟ್ಟಿದೆ. ಪಕ್ಷದ ಮುಖಂಡರ ಮಾರ್ಗದರ್ಶನದಂತೆ ಜವಾಬ್ದಾರಿ ವಹಿಸಿ ಕೆಲಸ ಮಾಡುತ್ತೇನೆ ಎಂದು ತಿಳಿಸಿದರು.

Leave a Reply

Your email address will not be published. Required fields are marked *

error: Content is protected !!