December 16, 2025

ಬೆಂಗಳೂರು: ಸರ್ಕಾರಿ ನೌಕರರಿಗೆ 17 ಪರ್ಸೆಂಟ್ ವೇತನ ಹೆಚ್ಚಳ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ  ಘೋಷಣೆ

0
image_editor_output_image542229958-1677651959153.jpg

ಬೆಂಗಳೂರು: ಸರ್ಕಾರಿ ನೌಕರರಿಗೆ 17 ಪರ್ಸೆಂಟ್ ವೇತನ ಹೆಚ್ಚಳ ಮಾಡುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿದರು.

ಸರ್ಕಾರಿ ನೌಕರರ ಮುಷ್ಕರ ಹಿನ್ನೆಲೆಯಲ್ಲಿ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಂಗಳವಾರ ನೌಕರರ ಜೊತೆ ಚರ್ಚೆ ಆದ ಬಳಿಕ ಹಣಕಾಸು ಇಲಾಖೆ ಅಧಿಕಾರಿಗಳ ಜೊತೆ ಮಾತಾಡಿದೆ, ಈ ವೇಳೆ ಒಂದು ಒಪ್ಪಂದಕ್ಕೆ ಬಂದಿದ್ದೇವೆ ಎಂದರು.

17% ಹೆಚ್ಚಳಕ್ಕೆ ಒಪ್ಪಿಗೆ ನೀಡಲಾಗಿದೆ. ಇದು ಮಧ್ಯಂತರ ಪರಿಹಾರ ರೂಪದಲ್ಲಿ ಇರಲಿದೆ. ಆಯೋಗದ ವರದಿ ಬಳಿಕ ಶೇಕಡವಾರು ಪ್ರಮಾಣದಲ್ಲಿ ಬದಲಾವಣೆ ಆಗಬಹುದು. ಸರ್ಕಾರಿ ನೌಕಕರು ಮುಷ್ಕರ ಕೈಬಿಡ್ತಾರೆ ಎಂಬ ವಿಶ್ವಾಸ ಇದೆ ಎಂದು ತಿಳಿಸಿದರು.

Leave a Reply

Your email address will not be published. Required fields are marked *

error: Content is protected !!