ಎಲ್‌ಪಿಜಿ ಸಿಲಿಂಡರ್‌ನ ಬೆಲೆಯಲ್ಲಿ ಮತ್ತೆ ಹೆಚ್ಚಳ

ನವದೆಹಲಿ: ತೈಲ ಮಾರುಕಟ್ಟೆ ಕಂಪನಿಗಳು 2023ರ ಹೊಸ ವರ್ಷದ ಮೂರನೇ ತಿಂಗಳು ಸಹ ಎಲ್‌ಪಿಜಿ ಸಿಲಿಂಡರ್‌ನ ಬೆಲೆಯನ್ನು ಹೆಚ್ಚಿಸುವ ಮೂಲಕ ಗ್ರಾಹಕರಿಗೆ ಶಾಕ್ ನೀಡಿವೆ.
ವಾಣಿಜ್ಯ ಸಿಲಿಂಡರ್‌ಗಳ ಬೆಲೆಯನ್ನು 350.50 ರೂಪಾಯಿಗೆ ಏರಿಸಲಾಗಿದೆ. ಇದು ವಾಣಿಜ್ಯೋದ್ದೇಶದ ಗ್ರಾಹಕರ ಕೈ ಸುಡಲಿದೆ. ಇನ್ನು, ಗೃಹಬಳಕೆಯ ಸಿಲಿಂಡರ್ ದರ 50 ರೂಪಾಯಿಗೆ ಏರಿಕೆ ಮಾಡಿದೆ.
ಪೆಟ್ರೋಲ್, ಡೀಸೆಲ್ ಬೆಲೆ ಯಥಾಸ್ಥಿತಿ ಮುಂದುವರಿದಿದ್ದು, ವಾಣಿಜ್ಯ ಮತ್ತು ಗೃಹ ಬಳಕೆಯ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆ ಈಗ ಏರಿಕೆಯಾಗಿದೆ. ಕರ್ಮಷಿಯಲ್ ಗ್ಯಾಸ್ ದರ ಇಂದಿನಿಂದ ಪ್ರತಿ ಸಿಲಿಂಡರ್‌ಗೆ 350.50 ರೂ.ಯಷ್ಟು ಏರಿಕೆಯಾಗಿದ್ದು, ಗಗನಕ್ಕೆ ಮುಟ್ಟಿದೆ. ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ 19 ಕೆ.ಜಿ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ನ ಬೆಲೆ ಈಗ 2,119.50 ರೂ. ಗೆ ಏರಿಕೆ ಕಂಡಿದೆ.
ಡೊಮೆಸ್ಟಿಕ್ ಗ್ಯಾಸ್ ದರ ಇಂದಿನಿಂದ ಪ್ರತಿ ಸಿಲಿಂಡರ್‌ಗೆ 50 ರೂ.ಯಷ್ಟು ಏರಿಕೆ ಕಂಡಿದ್ದು, ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ 14 ಕೆ.ಜಿ ಗೃಹ ಬಳಕೆಯ ಎಲ್‌ಪಿಜಿ ಸಿಲಿಂಡರ್‌ನ ಬೆಲೆ ಈಗ 1,103 ರೂ. ಗೆ ಏರಿಕೆ ಕಂಡಿದೆ.