March 21, 2026

ಗೃಹ ಸಚಿವ ಆರಗ ಜ್ಞಾನೇಂದ್ರ ಬೆಂಗಾವಲು ವಾಹನ ಬೈಕ್ ಗೆ ಡಿಕ್ಕಿ: ಸವಾರ ಮೃತ್ಯು

0
n47641560016777266652701e9d4575c1bac4e8427a439a83aeda6841fd3cc0b3c82116e3a66b7f6aa03991.jpg

ಹಾಸನ: ಬಂಕ್ ನಿಂದ ಪೆಟ್ರೋಲ್ ಹಾಕಿಸಿಕೊಂಡು ಹೊರಬರುತ್ತಿದ್ದ ಬೈಕ್ ಗೆ ಗೃಹ ಸಚಿವ ಆರಗ ಜ್ಞಾನೇಂದ್ರ ಅವರ ಎಸ್ಕಾರ್ಟ್ ವಾಹನ ಡಿಕ್ಕಿ ಹೊಡೆದ ಪರಿಣಾಮ ಸವಾರನ್ನೊಬ್ಬ ಸಾವನ್ನಪ್ಪಿದ್ದಾನೆ.

ಅರಸೀಕೆರೆ ತಾಲೂಕಿನ ಗಂಡಸಿ ಪೊಲೀಸ್ ಠಾಣೆ ಬಳಿ ಅಪಘಾತ ಸಂಭವಿಸಿದ್ದು, ಚಿಕ್ಕಗಂಡಸಿ ಗ್ರಾಮದ 45 ವರ್ಷದ ರಮೇಶ್ ಎಂಬುವರು ಮೃತಪಟ್ಟಿದ್ದಾರೆ.

ಆರಗ ಜ್ಞಾನೇಂದ್ರ ಅವರು ಮಲೆಮಹದೇಶ್ವರ ಬೆಟ್ಟದಿಂದ ಸ್ವಗ್ರಾಮಕ್ಕೆ ತೆರಳುತ್ತಿದ್ದಾಗ ಪೊಲೀಸ್ ವಾಹನ ಬೈಕ್ ಗೆ ಡಿಕ್ಕಿ ಹೊಡೆದಿತ್ತು. ಅಪಘಾತ ಸ್ಥಳಕ್ಕೆ ಗಂಡಸಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತನ ದೇಹವನ್ನು ಜಿಲ್ಲಾಸ್ಪತ್ರೆಗೆ ರವಾನಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!