July 15, 2026

ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆಗೆ ಹಿಜಾಬ್ ಧರಿಸಿ ಹಾಜರಾಗಲು ಅವಕಾಶ ಇಲ್ಲ: ಬಿ.ಸಿ ನಾಗೇಶ್

0
bc-nagesh-dh-2-1139070-1661371775.jpg

ಬೆಂಗಳೂರು: ಮಾ.9 ರಿಂದ ಆರಂಭವಾಗಲಿರುವ ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆಗೆ ಹಿಜಾಬ್ ಧರಿಸಿ ಹಾಜರಾಗಲು ಅನುಮತಿ ನೀಡುವಂತೆ ವಿದ್ಯಾರ್ಥಿನಿಯರು ಮಾಡಿದ ಮನವಿಯನ್ನು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು ನಿರ್ಲಕ್ಷಿಸಿದ್ದು, ಪದವಿಪೂರ್ವ ಕಾಲೇಜುಗಳ ಪ್ರಾಂಶುಪಾಲರು ಮತ್ತು ಅಧಿಕಾರಿಗಳಿಗೆ ಹಿಜಾಬ್ ಧರಿಸಲು ಅವಕಾಶವಿಲ್ಲ ಎಂದು ಸೂಚಿಸಿದೆ.

ಹಿಜಾಬ್‌ ಪ್ರಸ್ತಾವನೆಯು ಸುಪ್ರೀಂ ಕೋರ್ಟ್‌ನಲ್ಲಿರುವ ಕಾರಣ ವಾರ್ಷಿಕ ಪರೀಕ್ಷೆಯ ವೇಳೆ ಹಿಜಾಬ್ ಅನುಮತಿಸುವ ಪ್ರಶ್ನೆಯೇ ಉದ್ಬಾವಿಸುವುದಿಲ್ಲ. ಈ ಕಾರಣಕ್ಕೆ ಯಾವ ವಿದ್ಯಾರ್ಥಿನಿಯರು ಪರೀಕ್ಷೆಗೆ ಗೈರಾಗುತ್ತಾರೆ ಎಂಬುದನ್ನು ನಾವು ಗಂಭೀರವಾಗಿ ತೆಗೆದುಕೊಳ್ಳುವುದಿಲ್ಲ’ ಎಂದು ಶಾಲಾ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ತಿಳಿಸಿದರು.

ಉಡುಪಿ, ಚಿಕ್ಕಬಳ್ಳಾಪುರ, ಚಾಮರಾಜನಗರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳ ಪದವಿಪೂರ್ವ ಕಾಲೇಜುಗಳ ಕೆಲವು ಮುಸ್ಲಿಂ ವಿದ್ಯಾರ್ಥಿನಿಯರು ಆಯಾ ಕಾಲೇಜುಗಳ ಪ್ರಾಂಶುಪಾಲರಿಗೆ ಹಿಜಾಬ್ ಧರಿಸಿ ಪರೀಕ್ಷೆ ಬರೆಯಲು ಅನುಮತಿ ನೀಡುವಂತೆ ಮನವಿ ಸಲ್ಲಿಸಿದ್ದರು ಎಂದು ಇಲಾಖೆಯ ಮೂಲಗಳು ತಿಳಿಸಿವೆ.

Leave a Reply

Your email address will not be published. Required fields are marked *

error: Content is protected !!