March 31, 2026

ಕಾರ್ಕಳ: ಬಸ್- ಬೈಕ್ ನಡುವೆ ಢಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು

0
image_editor_output_image1681285031-1677739557662.jpg

ಕಾರ್ಕಳ: ಕಾರ್ಕಳ ತಾಲೂಕಿನ ಹಿರ್ಗಾನದ ಸಮೀಪದಲ್ಲಿ ಬಸ್ ಹಾಗೂ ಬೈಕ್ ನಡುವೆ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬುಧವಾರ ಸಂಜೆ ನಡೆದಿದೆ.

ಮೃತ ಬೈಕ್ ಸವಾರ ಹಿರ್ಗಾನ ಗ್ರಾಮದ ಕಾನಂಗಿ ಹಂಕರಬೆಟ್ಟು ನಿವಾಸಿ ಮನೋಹರ ಪೂಜಾರಿ(43ವ) ಎಂದು ಗುರುತಿಸಲಾಗಿದೆ.

ಮನೋಹರ ತನ್ನ ಬೈಕಿನಲ್ಲಿ ಬುಧವಾರ ಸಂಜೆ 7.30ರ ವೇಳೆಗೆ ಕಾರ್ಕಳ ಕಡೆಯಿಂದ ಹಿರ್ಗಾನ ಕಡೆಗೆ ಹೋಗುತ್ತಿದ್ದಾಗ ಎದುರಿನಿಂದ ಹೋಗುತ್ತಿದ್ದ ಬಸ್ಸಿಗೆ ಹಿಂದಿನಿಂದ ಬಂದು ವೇಗವಾಗಿ ಡಿಕ್ಕಿ ಹೊಡೆದ ಪರಿಣಾಮ ನಡೆದ ಭೀಕರ ಅಪಘಾತದಲ್ಲಿ ಮನೋಹರ ಪೂಜಾರಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಕಾರ್ಕಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ಘಟನಾ ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಿದ್ದಾರೆ.

ಮೃತ ಮನೋಹರ್ ಬಹೆರೈನ್ ನಲ್ಲೊ ಉದ್ಯೋಗದಲ್ಲಿದ್ದು ಕೆಲ ದಿನಗಳಲ್ಲೇ ವಿದೇಶಕ್ಕೆ ತೆರಳುವವರಿದ್ದರು.

ಇದಕ್ಕೆಂದು ಕಾರ್ಕಳಕ್ಕೆ ಬಂದು ವೈದ್ಯಕೀಯ ತಪಾಸಣೆ ಮಾಡಿಸಿಕೊಂಡು ದೈಹಿಕ ದೃಢತೆ ಪ್ರಮಾಣಪತ್ರ ತರಲು ಕಾರ್ಕಳಕ್ಕೆ ಹೋಗಿ ಬಾಪಾಸು ಮನೆಗೆ ಹೋಗುತ್ತಿದ್ದಾಗ ದುರ್ಘಟನೆ ನಡೆದಿದೆ. ಮೃತರು ಪತ್ನಿ- ಮಗಳನ್ನು ಅಗಲಿದ್ದಾರೆ.

Leave a Reply

Your email address will not be published. Required fields are marked *

You may have missed

error: Content is protected !!