March 11, 2026

ಕಾಲೇಜಿನಲ್ಲಿ ಉಪನ್ಯಾಸಕರ ಕಿರುಕುಳಕ್ಕೆ ಬೇಸತ್ತು ವಿದ್ಯಾರ್ಥಿ ಆತ್ಮಹತ್ಯೆ

0
image_editor_output_image-614172532-1677754418368.jpg

ಹೈದರಾಬಾದ್‌: ಕಾಲೇಜಿನಲ್ಲಿ ಉಪನ್ಯಾಸಕರ ಕಿರುಕುಳಕ್ಕೆ ಬೇಸತ್ತು ವಿದ್ಯಾರ್ಥಿಯೊಬ್ಬ ಅಮ್ಮ ಐ ಲವ್ ಯೂ ಎಂದು ಬರೆದಿಟ್ಟು ಆತ್ಮಹತ್ಯೆಗೆ ಶರಣಾದ ಘಟನೆ ಹೈದರಾಬಾದ್‌ನಲ್ಲಿ ನಡೆದಿದೆ.

ಇಲ್ಲಿನ ಶ್ರೀ ಚೈತನ್ಯ ಕಾಲೇಜಿನಲ್ಲಿ ಪ್ರಥಮ ಪಿಯುಸಿ ಕಲಿಯುತ್ತಿದ್ದ ವಿದ್ಯಾರ್ಥಿ ಸಾತ್ವಿಕ್ ಆತ್ಮಹತ್ಯೆಗೆ ಶರಣಾದಾತ. ಈತನಿಗೆ ಉಪನ್ಯಾಸಕರು ಪದೇ ಪದೇ ನೀನು ಅನುತ್ತೀರ್ಣನಾಗಿದ್ದೀಯ ಎಂಬುದಾಗಿ ಹೀಯಾಳಿಸಿ ಕಿರುಕುಳ ನೀಡುತ್ತಿದ್ದರು. ಅಲ್ಲದೆ ಆತನ ಮೇಲೆ ಅಧಿಕ ಒತ್ತಡ ಹಾಕುತ್ತಿದ್ದರು. ಇದರಿಂದ ನೊಂದ ಯುವಕ ಡೆತ್‌ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿದ್ದಾನೆ. ಡೆತ್‌ನೋಟ್‌ನಲ್ಲಿ ಅಮ್ಮ ಐ ಲವ್ ಯೂ ಎಂದು ಬರೆದಿದ್ದಾನೆ. ಅಲ್ಲದೆ ಉಪನ್ಯಾಸಕರು ನೀಡಿದ ಕಿರುಕುಳದ ಬಗ್ಗೆಯೂ ಬರೆದುಕೊಂಡಿದ್ದಾನೆ.

ವಿದ್ಯಾರ್ಥಿ ಸಾವನ್ನಪ್ಪಿರುವ ವಿಚಾರ ತಿಳಿದು ಪೋಷಕರು ಕೂಡಲೇ ಶಾಲೆಗೆ ಆಗಮಿಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸ್ಥಳದಲ್ಲಿ ಉದ್ವಿಗ್ನ ಪರಿಸ್ಥಿತಿ ಉಂಟಾದ ಹಿನ್ನೆಲೆಯಲ್ಲಿ ಪೊಲೀಸರು ಆಗಮಿಸಿ ಪರಿಸ್ಥಿತಿ ತಿಳಿಗೊಳಿಸುವ ಪ್ರಯತ್ನ ಮಾಡಿದರು. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ತಿಳಿದು ಬಂದಿದೆ. ಕಿರುಕುಳ ನೀಡಿದ ಉಪನ್ಯಾಸಕರ ವಿರುದ್ದ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

You may have missed

error: Content is protected !!