May 12, 2026

ಕುಂದಾಪುರ: ಕೆಲಸ ಮಾಡುತ್ತಿದ್ದಾಗ ವಿದ್ಯುತ್ ತಗುಲಿ ಕೃಷಿಕ ಸ್ಥಳದಲ್ಲಿಯೇ ಮೃತ್ಯು

0
dead-body-suicide-istock-1062104-1639773481-1-1095810-1648563752-1-1134753-1660085278-1135703-1660341251-1135969-1660424606.jpg

ಕುಂದಾಪುರ: ಅಡಿಕೆ ತೋಟದಲ್ಲಿ ಕೆಲಸ ಮಾಡುತ್ತಿದ್ದ ಸಂದರ್ಭದಲ್ಲಿ ವಿದ್ಯುತ್ ತಗುಲಿ ಕೃಷಿಕ ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ಬೈಂದೂರು ತಾಲೂಕಿನ ನಾಡಾ ಗ್ರಾಮದ ಕೋಣ್ಕಿ ಎಂಬಲ್ಲಿ ಗುರುವಾರ ನಡೆದಿದೆ.

ಕೋಣ್ಕಿ ಅಂಗಡಿಮನೆ ಭುಜಂಗ ಶೆಟ್ಟಿ ಮೃತಪಟ್ಟ ದುರ್ದೈವಿ. ಮನೆ ಸಮೀಪದ ಅಡಿಕೆ ತೋಟದಲ್ಲಿ ಅಡಿಕೆ ಕೊಯ್ಲು ಮಾಡುತ್ತಿದ್ದ ಸಂದರ್ಭದಲ್ಲಿ ಕಬ್ಬಿಣದ ಕೊಕ್ಕೆ ಆಕಸ್ಮಿಕವಾಗಿ ಎಚ್.ಟಿ. ವಿದ್ಯುತ್ ತಂತಿಗೆ ತಗುಲಿದೆ. ಅದರಿಂದ ವಿದ್ಯುತ್ ಹರಿದು ಸ್ಥಳದಲ್ಲೇ ಅವರು ದಾರುಣವಾಗಿ ಸಾವನ್ನಪ್ಪಿದ್ದಾರೆ.

ಗಂಗೊಳ್ಳಿ ಪೊಲೀಸ್ ಠಾಣೆ ಪಿಎಸ್‍ಐ ವಿನಯ್ ಮತ್ತು ಸಿಬ್ಬಂದಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಗಂಗೊಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

error: Content is protected !!