ಮುಂದುವರಿದ ಲೋಕಾಯುಕ್ತ ದಾಳಿ: ಬಿಜೆಪಿ ಶಾಸಕನ ಮನೆಯಲ್ಲಿ 6 ಕೋಟಿ ರೂ. ಪತ್ತೆ
ಬೆಂಗಳೂರು: ವಿಧಾನಸಭೆ ಚುನಾವಣೆ ಹೊತ್ತಿನಲ್ಲಿ ದಾವಣಗೆರೆಯ ಚನ್ನಗಿರಿ ಕ್ಷೇತ್ರದ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಪುತ್ರ BWSSB ಮುಖ್ಯ ಲೆಕ್ಕಾಧಿಕಾರಿ ಮಾಡಾಳ್ ಪ್ರಶಾಂತ್ ಕಚೇರಿಯಲ್ಲಿ ನಿನ್ನೆ ಮಾರ್ಚ್ 2 ಗುರುವಾರ ಸಾಯಂಕಾಲದಿಂದ ಇಂದು ಶುಕ್ರವಾರ ಬೆಳಗಿನ ಜಾವದವರೆಗೂ ಲೋಕಾಯುಕ್ತ ದಾಳಿ ಮುಂದುವರಿದಿದ್ದು ಈ ವೇಳೆ ರಾಶಿ ರಾಶಿ ಹಣ ಪತ್ತೆಯಾಗಿದೆ.
ಬೆಂಗಳೂರಿನ ಕ್ರೆಸೆಂಟ್ ರಸ್ತೆಯಲ್ಲಿರುವ ಮಾಡಾಳು ಪ್ರಶಾಂತ್ ಅವರ ಕಚೇರಿಯಲ್ಲಿ ನಿನ್ನೆ ಸಂಜೆ 6.30ಕ್ಕೆ ಪ್ರಶಾಂತ್ ಅವರು 40 ಲಕ್ಷ ರೂಪಾಯಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ದಾಳಿ ಮಾಡಲಾಗಿತ್ತು.
ಬಳಿಕ ಕಚೇರಿಯಲ್ಲಿ ಮತ್ತು ಅವರ ಮನೆಯಲ್ಲಿ ಶೋಧ ಕಾರ್ಯ ಮುಂದುವರಿಯಿತು. ಅದು ಇಂದು ಬೆಳಗಿನ ಜಾವದವರೆಗೂ ಮುಂದುವರಿದಿತ್ತು.
ಈ ವೇಳೆ ಸಮಗ್ರವಾಗಿ ಶೋಧ ನಡೆಸಿದಾಗ ಅವರ ಕಚೇರಿಯಲ್ಲಿ ದಾಖಲೆ ಹಾಗೂ ಸುಮಾರು 6 ಕೋಟಿ ರೂಪಾಯಿ ನಗದು ಹಣ ಸಿಕ್ಕಿದ್ದು ಲೋಕಾಯುಕ್ತ ಸಿಬ್ಬಂದಿಯನ್ನು ದಂಗುಬಡಿಸಿದೆ.




