March 21, 2026

ಕುಂದಾಪುರ: ಸ್ಕೂಟರ್ ಢಿಕ್ಕಿ: ರಸ್ತೆ ದಾಟಲು ನಿಂತಿದ್ದ ಪಾದಾಚಾರಿ ಮೃತ್ಯು

0
IMG-20230304-WA0017.jpg

ಕುಂದಾಪುರ: ರಸ್ತೆ ದಾಟಲು ನಿಂತಿದ್ದ ಪಾದಾಚಾರಿಯೊಬ್ಬರಿಗೆ ಸ್ಕೂಟರ್ ಡಿಕ್ಕಿ ಹೊಡೆದ ಪರಿಣಾಮ ಪಾದಾಚಾರಿ ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಸಾಸ್ತಾನ ಬಸ್ ನಿಲ್ದಾಣದ ಸಮೀಪ ಶುಕ್ರವಾರ ಸಂಜೆ ನಡೆದಿದೆ.

ಅಪಘಾತದಲ್ಲಿ ಮೃತಪಟ್ಟ ಪಾದಾಚಾರಿಯನ್ನು ನಾರಾಯಣ ಎಂದು ಗುರುತಿಸಲಾಗಿದೆ.

ಅಪಘಾತದಲ್ಲಿ ಸ್ಕೂಟರ್ ಸವಾರನಿಗೂ ಗಾಯಗಳಾಗಿದ್ದು, ಸ್ಕೂಟರ್ ಸವಾರ ಹಾಗೂ ಪಾದಾಚಾರಿ ನಾರಾಯಣ ಇಬ್ಬರನ್ನೂ ಬ್ರಹ್ಮಾವರದ ಮಹೇಶ್ ಆಸ್ಪತ್ರೆಗೆ ಸಾಗಿಸಲಾಗಿದ್ದು ಈ ವೇಳೆ ಪಾದಾಚಾರಿ ಮೃತಪಟ್ಟಿದ್ದಾರೆ ಎಂದು ವೈದ್ಯರು ದೃಢಪಡಿಸಿದ್ದು, ಸ್ಕೂಟರ್ ಸವಾರನಿಗೆ ಚಿಕಿತ್ಸೆ ನೀಡಲಾಗುತ್ತಿದೆ.

ಈ ಬಗ್ಗೆ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

error: Content is protected !!